ಆಟೋ ಚಾಲಕನಿಂದ ಮಹಿಳೆಯ ಮಾನಭಂಗಕ್ಕೆ ಯತ್ನ

12:17 PM, Wednesday, March 30th, 2022
Share
1 Star2 Stars3 Stars4 Stars5 Stars
(No Ratings Yet)
Loading...

Auto Rikshawಪುತ್ತೂರು :  ತನ್ನ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯಮೇಲೆ ಆಟೋ ಚಾಲಕನೊಬ್ಬ ಮಾನಭಂಗಕ್ಕೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಕುಪಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ಘಾನ್ ಮಾನಭಂಗಕ್ಕೆ ಯತ್ನಿಸಿದ ಆಟೋ ಚಾಲಕ.

ಮಹಿಳೆಯೊಬ್ಬರನ್ನು ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗಿದ್ದಾನೆ. ದರ್ಬೆ ಹರ್ಷ ಇಲೆಕ್ಟ್ರಾನಿಕ್ಸ್ ಬಳಿ ತಲುಪುತ್ತಿದ್ದಂತೆ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು,  ಜೀವ ಬೆದರಿಕೆಯೊಡ್ಡಿದ್ದಾನೆ.

ಈ ಘಟನೆ ಕುರಿತು ನೊಂದ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English