- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಆಟೋ ಚಾಲಕನಿಂದ ಮಹಿಳೆಯ ಮಾನಭಂಗಕ್ಕೆ ಯತ್ನ

Auto Rikshaw [1]ಪುತ್ತೂರು :  ತನ್ನ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯಮೇಲೆ ಆಟೋ ಚಾಲಕನೊಬ್ಬ ಮಾನಭಂಗಕ್ಕೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಕುಪಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ಘಾನ್ ಮಾನಭಂಗಕ್ಕೆ ಯತ್ನಿಸಿದ ಆಟೋ ಚಾಲಕ.

ಮಹಿಳೆಯೊಬ್ಬರನ್ನು ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗಿದ್ದಾನೆ. ದರ್ಬೆ ಹರ್ಷ ಇಲೆಕ್ಟ್ರಾನಿಕ್ಸ್ ಬಳಿ ತಲುಪುತ್ತಿದ್ದಂತೆ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು,  ಜೀವ ಬೆದರಿಕೆಯೊಡ್ಡಿದ್ದಾನೆ.

ಈ ಘಟನೆ ಕುರಿತು ನೊಂದ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.