ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿ ಮಾಡಿದ ಆರೋಪಿಗೆ 10 ವರ್ಷ ಜೈಲು

7:23 PM, Friday, April 1st, 2022
Share
1 Star2 Stars3 Stars4 Stars5 Stars
(No Ratings Yet)
Loading...

Pregnantಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪಿಗೆ 10 ವರ್ಷ ಜೈಲು ಮತ್ತು 30,000 ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಸುರತ್ಕಲ್‌ ಸಮೀಪದ ಸಸಿಹಿತ್ಲು ನಿವಾಸಿ ವಾಮನ ಪೂಜಾರಿ (59) ಶಿಕ್ಷೆಗೊಳಗಾದ  ಆರೋಪಿ.

2016ರ ಸೆಪ್ಟಂಬರ್‌ ತಿಂಗಳಲ್ಲಿ  ಹಗಲು ಹೊತ್ತಿನಲ್ಲಿ 16 ವರ್ಷ ಪ್ರಾಯದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ವಾಮನ ಪೂಜಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಯಾರಿಗೂ ವಿಷಯ ಹೇಳಬಾರದೆಂದು ಬೆದರಿಕೆ ಹಾಕಿದ್ದ. ಆ ಬಳಿಕ ಪದೇ ಪದೇ ಆತ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದು, ಇದರ ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದಳು. 2017ರ ಮಾ. 29ರಂದು ಖಾಸಗಿ ಆಸ್ಪತ್ರೆಯಲ್ಲಿ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.

ಈ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಡಿಎನ್‌ಎ ಪರೀಕ್ಷೆ ನಡೆಸಿದಾಗ ಆರೋಪಿ ವಾಮನ ಪೂಜಾರಿ ಆ ಮಗುವಿನ ತಂದೆ ಎನ್ನುವುದು ಸಾಬೀತಾಗಿತ್ತು. ಸುರತ್ಕಲ್‌ ಎಸ್‌ಐ ಎಚ್‌.ಎಂ. ಪೂವಪ್ಪ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಪೊಲೀಸ್‌ ಇನ್‌ಸ್ಪೆಕ್ಟರ್‌ ಚೆಲುವರಾಜು ಅವರು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕ ರಣದ ವಿಚಾರಣೆಯನ್ನು ಕೈಗೆತ್ತಿ ಕೊಂಡ ಮಂಗಳೂರಿನ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಹಾಗೂ 2ನೇ ತ್ವರಿತ ಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬುಧವಾರ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಪೋಕ್ಸೋ ಕಲಂ 6ರನ್ವಯ 10 ವರ್ಷ ಜೈಲು ಶಿಕ್ಷೆ ಮತ್ತು 30,000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ ಹೆಚ್ಚುವರಿಯಾಗಿ 2 ತಿಂಗಳ ಸಾದಾ ಸಜೆಯನ್ನು ಅನುಭವಿಸಬೇಕು. ಐಪಿಸಿ ಸೆಕ್ಷನ್‌ 506 (ಕೊಲೆ ಬೆದರಿಕೆ ಆರೋಪ) ಅನ್ವಯ ಒಂದು ವರ್ಷ ಸಾದಾ ಸಜೆ ವಿಧಿಸಲಾಗಿದೆ. ಇಷ್ಟೇ ಅಲ್ಲದೆ ಸಂತ್ರಸ್ತ ಬಾಲಕಿಗೆ 4 ಲಕ್ಷ ರೂ.ಗಳನ್ನು ಸರಕಾರದಿಂದ ಪರಿಹಾರವಾಗಿ ಕೊಡಿಸಬೇಕೆಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಸರಕಾರದ ಪರ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಸಿ. ವೆಂಕಟರಮಣಸ್ವಾಮಿ ಅವರು ವಾದಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English