ಕಾಸರಗೋಡು : ಕಾಸರಗೋಡಿನಲ್ಲಿ ಕನ್ನಡಕ್ಕೆ ಶಕ್ತಿ ಮೀರಿ ದುಡಿಯುತ್ತಿದ್ದವರು. ಕನ್ನಡ ಶಾಲೆಗಳ ಉಳಿವಿಗೆ ಬಹಳ ಹೋರಾಟ ಮಾಡಿ ಕನ್ನಡದ ಅಸ್ಮಿತೆಗೆ ಶಕ್ತಿ ತುಂಬಿದ ವ್ಯಕ್ತಿ . ಎಸ್. ವಿ ಭಟ್ (72) ಅವರು ಹೃದಯಾಘಾತದಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಬೀರಂತಬೈಲ್ ನಿವಾಸಿಯಾಗಿದ್ದ ಭಟ್ ರವರು ಕುಂಬಳೆ, ಅಡೂರು, ಕಾಸರಗೋಡು ಸೇರಿದಂತೆ ಜಿಲ್ಲೆಯ ಹಲವೆಡೆ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ರಾಗಿ ಕನ್ನಡ ಹೋರಾಟಗಾರಾಗಿ, ಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಯಾಗಿಯೂ ಸೇವೆ ಸಲ್ಲಿಸಿದ್ದರು. ಮೂರು ಬಾರಿ ಕಸಾಪದ ಗಡಿನಾಡ ಘಟಕ ಅಧ್ಯಕ್ಷರಾಗಿ ಆಯ್ಕೆಯಾಗಿ, ಕನ್ನಡ ಹೋರಾಟ, ಸಮ್ಮೇಳನ ಹಾಗೂ ವಿವಿಧ ಕನ್ನಡ ಪರ ಕಾರ್ಯಕ್ರಮಗಳ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದರು.
ಬದಿಯಡ್ಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮರಳುತ್ತಿದ್ದಾಗ ದಾರಿ ಮಧ್ಯೆ ಎದೆ ನೋವು ಕಾಣಿಸಿಕೊಂಡಿದ್ದು, ಕಾಸರಗೋಡಿನ ಆಸ್ಪತ್ರೆಗೆ ತಲಪಿಸಲಾಯಿತಾದರೂ ಅವರನ್ನು ಉಳಿಸಲಾಗಲಿಲ್ಲ.
ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಳಗವನ್ನು ಅಗಲಿದ್ದಾರೆ.
Click this button or press Ctrl+G to toggle between Kannada and English