ಮಂಗಳೂರು : ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಪಣಂಬೂರು ಬೀಚ್ ಬಳಿ ಇಂದು ದಾಳಿ ನಡೆಸಿ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಹೊಂದಿದ್ದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂಬರ್ ಗ್ರೀಸ್ ಅಪರೂಪದ ವನ್ಯಜೀವಿ ಉತ್ಪನ್ನವಾಗಿದ್ದು ಅದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚು ಮೌಲ್ಯಯುತವಾಗಿದೆ. ಮೂವರ ವಶದಿಂದ 90 ಲಕ್ಷ ರೂಪಾಯಿ ಮೌಲ್ಯದ 900 ಗ್ರಾಂ ಅಂಬರ್ ಗ್ರೀಸ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳನ್ನು ಉಡುಪಿ ಜಿಲ್ಲೆ ಸಾಲಿಗ್ರಾಮ ಗ್ರಾಮದ ಜಯಕರ (39) , ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನ ಆದಿತ್ಯ (25) ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಲೋಹಿತ್ ಕುಮಾರ್ ಗುರಪ್ಪನವರ್ (39 ವರ್ಷ) ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರವಾಲ್, ಐಪಿಎಸ್ ರವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಅಪರಾಧ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ದಾಳಿಯನ್ನು ನಡೆಸಿದ್ದಾರೆ.
Click this button or press Ctrl+G to toggle between Kannada and English