ಉಳ್ಳಾಲ : ಪತ್ನಿ ಮನೆಯಲ್ಲಿ ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಎಂಬವರು ಆತ್ಮಹತ್ಯೆಗೈದ ಘಟನೆ ನಡೆದಿದೆ.
ರವೀಂದ್ರ ಅವರು ಭಾನುವಾರ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮದ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನು ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಪತ್ನಿಯ ಮನೆಗೆ ವಾಪಸ್ಸಾಗಿದ್ದರು.
ಸಂಜೆ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ಗಾಬರಿಗೊಂಡ ಪತ್ನಿ ನೆರೆಮನೆಯವರಲ್ಲಿ ವಿಚಾರಿಸಿದ್ದಾರೆ. ಅವರು ಮನೆ ಕಡೆ ತೆರಳಿದಾಗ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮ ಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ.
ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರ್ಥಿಕವಾಗಿ ನೊಂದು ಕೃತ್ಯ ಎಸಗಿರುವ ಶಂಕೆಯಿದೆ.
Click this button or press Ctrl+G to toggle between Kannada and English