ಉಡುಪಿ : ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾರೆಂದು ಚೈತ್ರಾ ಕುಂದಾಪರ ಸೇರಿದಂತೆ 6 ಮಂದಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಧೀಶರು 10 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದ್ದಾರೆ.
5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಚೈತ್ರಾ ಕುಂದಾಪುರ ಹಾಗೂ ಇತರರನ್ನು ಬೆಂಗಳೂರಿನಲ್ಲಿ 1ನೇ ಎಸಿಎಂಎಂ ಕೋರ್ಟ್ ನಲ್ಲಿ ಹಾಜರುಪಡಿಸಲಾಗಿತ್ತು. ಈ ವೇಳೆ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಿಗೆ ಸಿಸಿಬಿ ಪೊಲೀಸರು ಮನವಿ ಮಾಡಿದ್ದರು.
ಈ ವೇಳೆ ನ್ಯಾಯಾಧೀಶರ ಮುಂದೆ ಉಡುಪಿಯಲ್ಲಿ ಪೊಲೀಸರು ನನ್ನನ್ನು ಹಿಡಿದು ಎಳೆದಾಡಿ ಹಿಂಸೆ ನೀಡಿದ್ದಾರೆ ಎಂದು ಚೈತ್ರಾ ಆರೋಪಿಸಿದ್ದಾರೆ.
ಈ ಬಗ್ಗೆ ಉಡುಪಿ ಠಾಣೆಯ ಎಸಿಪಿ ರೀನಾ ಸುವರ್ಣ ಬಂಧನದ ಬಗ್ಗೆ ಎಲ್ಲಾ ವಿಡಿಯೋ ಮಾಡಲಾಗಿದೆ. ಜೊತೆಗೆ, ಮೆಡಿಕಲ್ ರಿಪೋರ್ಟ್ ಕೂಡ ಮಾಡಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
Click this button or press Ctrl+G to toggle between Kannada and English