ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯ ಫುಟ್ಬಾಲ್ ಪಂದ್ಯಾಟ ಉದ್ಘಾಟನೆ

8:44 PM, Friday, September 15th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಪಂದ್ಯಾಟ ದಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ, ಕ್ರೀಡಾಕೂಟ ಹಬ್ಬದ ವಾತಾವರಣದಲ್ಲಿ ನಡೆಯುತ್ತಿದ್ದು ಸಂಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಿದೆ ಎಂದು ಬಿ.ಎಂ. ಶಾಲೆಯ ಸಂಚಾಲಕ ಎಸ್.ಎಸ್.ಸಾಲಿನ್ ಅಭಿಪ್ರಾಯಪಟ್ಟರು.

ಉಳ್ಳಾಲ ಬಿ.ಎಂ.ಶಾಲೆಯ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಎರಡು ದಿನ ನಡೆಯಲಿರುವ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾಟದ ಶುಕ್ರವಾರ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ್ ಉದ್ಘಾಟಿಸಿ, ಜೀವನದಲ್ಲಿ ಏನೇ ಪಡೆಯಬೇಕಾದರೂ ಸತತ ಪ್ರಯತ್ನ ಅಗತ್ಯ, ಪ್ರಸ್ತುತ ದಿನಗಳಲ್ಲಿ ಕ್ರಿಕೆಟ್, ಫುಟ್ಬಾಲ್ ಸಹಿತ ಇತರ ಆಟಗಳು ಮೊಬೈಲ್ ಗೆ ಸೀಮಿತಗೊಳಿಸದೆ ಮೈದಾನದಲ್ಲಿ ಆಡಿ ಸ್ನಾಯುಗಳನ್ನು ಗಟ್ಟಿಗೊಳಿಸಬೇಕು, ಜೊತೆಗೆ ದೈಹಿಕ ಆರೋಗ್ಯ ಕಾಪಾಡಬಹುದು ಎಂದು ತಿಳಿಸಿದರು.

ಈ ಸಂದರ್ಭ ಕ್ರೀಡಾ ಸಾಧಕರಾದ ಬಿ.ಎಂ.ಅಸ್ಲಂ, ಅಝಾದ್, ಡಾ.ಪ್ರಕಾಶ್ ಡಿಸೋಜ ಇವರನ್ನು ಸನ್ಮಾನಿಸಲಾಯಿತು.

ದಕ್ಷಿಣ ವಲಯ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಡಾ.ಪ್ರಶಾಂತ್ ಕುಮಾರ್ ಕೆ.ಎಸ್., ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಕಾರ್ಯದರ್ಶಿ ಮೋಹನ್ ಶಿರ್ಲಾಲ್, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆಎಂಕೆ ಮಂಜನಾಡಿ, ನೋಡೆಲ್ ಅಧಿಕಾರಿ ಪ್ರಮೋದ್, ಉಮೇಶ್ ಉಚ್ಚಿಲ್, ದೈಹಿಕ ಶಿಕ್ಷಣ ಶಿಕ್ಷಕಿ ಜಾನೆಟ್ ಮಾಬೆನ್, ಫುಟ್ಬಾಲ್ ತರಬೇತುದಾರ ಸಾಜಿದ್ ಮೊದಲಾದವರು ಉಪಸ್ಥಿತರಿದ್ದರು.

ಬಿ.ಎಂ.ಶಾಲೆಯ ಮುಖ್ಯಶಿಕ್ಷಕಿ ಜಯವಂತಿ ಸೋನ್ಸ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಯೋಗೀಶ್ ಪಿ. ವಂದಿಸಿದರು.

ಶಿಕ್ಷಕಿ ಉಷಾ ಎಂ.ಕಾರ್ಯಕ್ರಮ ನಿರೂಪಿಸಿದರು. ಲಿಲ್ಲಿ ಪಾಯ್ಸ್, ಜಿಲ್ಲಾಧ್ಯಕ್ಷೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾಟಕ್ಕೆ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಚಾಲನೆ ನೀಡಿದರು. ಈ ಸಂದರ್ಭ ಬಿ.ಎಂ. ಶಾಲೆಯ ಸಂಚಾಲಕ ಎಸ್.ಎಸ್.ಸಾಲಿನ್, ದಕ್ಷಿಣ ವಲಯ ಕ್ಷೇತ್ರ ಸಮನ್ವಯಾಧಿಕಾರಿ ಡಾ.ಪ್ರಶಾಂತ್ ಕುಮಾರ್ ಕೆ.ಎಸ್., ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಮೋಹನ್ ಶಿರ್ಲಾಲ್ ಇನ್ನಿತರರು ಉಪಸ್ಥಿತರಿದ್ದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English