ಮಂಗಳೂರು : ಪೊಲೀಸರಲ್ಲಿ ಪ್ರಭಾವ ಬೀರಿ ಮಾತುಕತೆ ನಡೆಸಿ ಪ್ರಕರಣದಿಂದ ಹೆಸರನ್ನು ತೆಗೆಯುತ್ತೇನೆ ಎಂದು ಹೇಳಿ ರೂ 2.95 ಲಕ್ಷ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
ಆರೋಪಿಯನ್ನು ಅಬ್ದುಲ್ ಖಾದರ್ ರಿಝ್ವಾನ್, ಪ್ರಾಯ(28), ಮಲಾರ್ ಮನೆ, ಅಕ್ಷರ ನಗರ, ಪಾವೂರು ಅಂಚೆ, ಮಂಗಳೂರು ಎಂದು ಗುರುತಿಸಲಾಗಿದೆ.
2021 ನೇ ದಶಂಬರ್ ತಿಂಗಳಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣವೊಂದು ದಾಖಲಾಗಿದ್ದು, ಈ ಪ್ರಕರಣದಲ್ಲಿನ ಆರೋಪಿಯು ದಸ್ತಗಿರಿಯಾಗದೇ ಇದ್ದು, ಈತನ ದಸ್ತಗಿರಿಗಾಗಿ ಹುಡುಕಾಡುತ್ತಿದ್ದರು. ಈ ಸಮಯದಲ್ಲಿ ಆತನನ್ನು ಸಂಪರ್ಕಿಸಿದ ಇಬ್ಬರು ಪ್ರಕರಣದಲ್ಲಿ ಹೆಸರನ್ನು ತೆಗೆಯಲು ಪೊಲೀಸರಿಗೆ ಹಣ ನೀಡಿ ಅವರ ಜೊತೆ ಪ್ರಭಾವ ಬೀರಿ ಮಾತುಕತೆ ನಡೆಸಿ ಕೇಸಿನಿಂದ ಹೆಸರನ್ನು ತೆಗೆಯುತ್ತೇವೆ ಎಂದು ಹೇಳಿಕೊಂಡು ಆತನಿಂದ 3 ಲಕ್ಷ ಹಣವನ್ನು ಡಿಮ್ಯಾಂಡ್ ಮಾಡಿ ಹಂತ ಹಂತವಾಗಿ ಒಟ್ಟು 2,95,000/- ಹಣವನ್ನು ಪಡೆದುಕೊಂಡಿದ್ದರು. ಈ ಹಣವನ್ನು ಪಡೆದ ಬಳಿಕ ಹಣ ನೀಡಿದ ವ್ಯಕ್ತಿಯನ್ನು ಪೊಲೀಸರು ಹುಡುಕಾಡುತ್ತಿದ್ದ ವಿಚಾರವನ್ನು ತಿಳಿದ ಆತನು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದನು.
ಇದಾದ ನಂತರ ಆತನಿಂದ ಹಣ ಪಡೆದುಕೊಂಡ ವ್ಯಕ್ತಿಗಳಿಂದ ಹಣವನ್ನು ವಾಪಾಸ್ಸು ನೀಡುವಂತೆ ತಿಳಿಸಿದಾಗ ಹಣದ ವಿಚಾರದಲ್ಲಿ ಕರೆ ಮಾಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ನಂತರ ರೂ. 30,000/- ಹಣವನ್ನು ನೀಡುವಂತೆ ಬೇಡಿಕೆಯಿಟ್ಟಿದ್ದು, ಇದರಿಂದ ಹಣವನ್ನು ಸುಲಿಗೆ ಮಾಡಿದ ಆರೋಪಿಗಳ ವಿರುದ್ಧ ಹಣವನ್ನು ಕಳೆದುಕೊಂಡ ವ್ಯಕ್ತಿಯು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯು ಭಾಗಿಯಾಗಿದ್ದು, ಆತನ ಪತ್ತೆ ಕಾರ್ಯ ಮುಂದುವರಿದಿದೆ.
Click this button or press Ctrl+G to toggle between Kannada and English