ಬೈಕ್ ಕಳ್ಳತನ ಮಾಡಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

12:54 AM, Monday, September 18th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಸುಳ್ಯ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಬಂಧಿತ ಆರೋಪಿ.

ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,ತನಿಖೆ ನಡೆಸಿದ ಸುಳ್ಯ ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ತಂಡ ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ.

ಇದಲ್ಲದೆ ಆರೋಪಿ ಸುಬ್ರಮಣಿ ಕೆಲ ದಿನಗಳ ಹಿಂದೆ ಸುಳ್ಯ ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಪರ್ಸ್ ತೆಗೆದುಕೊಂಡು ಹೋಗಿದ್ದು ತನಿಖೆ ವೇಳೆ ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English