ಕಿರುತೆರೆ ನಟಿಯ ಮೃತ ದೇಹ ಮನೆಯ ಕಿಟಿಕಿಯಲ್ಲಿ ನೇತು ಹಾಕಿದ ಸ್ಥಿತಿಯಲ್ಲಿ ಪತ್ತೆ

1:00 PM, Saturday, May 14th, 2022
Share
1 Star2 Stars3 Stars4 Stars5 Stars
(No Ratings Yet)
Loading...

ಕಾಸರಗೋಡು : ಕಿರುತೆರೆ ನಟಿಯ ಮೃತ ದೇಹ ಆಕೆಯ ಹುಟ್ಟುಹಬ್ಬದ ದಿನದಂದೇ ಮನೆಯ ಕಿಟಿಕಿಯಲ್ಲಿ ಸಂಶಯಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚೆರ್ವತ್ತೂರಿನ ಶಹನಾ(20) ಮೃತಪಟ್ಟವಳು. ಮನೆಯ ಕಿಟಿಕಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಘಟನೆಗೆ ಸಂಬಂಧಪಟ್ಟತೆ ಪತಿ ಸಜ್ಜಾದ್ ನನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಶಹನಾಳನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸಜ್ಜಾದ್ ಕೆಲ ಸಮಯಗಳಿಂದ ಶಹನಾಳಿಗೆ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ . ಕೊಲೆ ಮಾಡುವುದಾಗಿ ಬೆದರಿಸಿದ್ದ, ಈ ಬಗ್ಗೆ ಶಹನಾ ತಾಯಿ ಬಳಿ ಹೇಳಿದ್ದ ಎನ್ನಲಾಗಿದೆ.

ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ಪರಿಸರವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜಾಹೀರಾತು ಹಾಗೂ ಕೆಲ ಕಿರುಚಿತ್ರಗಳಲ್ಲಿ ಈಕೆ ನಟಿಸಿದ್ದಳು. ಇತ್ತೀಚಿಗೆ ತಮಿಳು ಚಿತ್ರರಂಗದಿಂದ ಆಫರ್ ಬಂದಿತ್ತು ಎನ್ನಲಾಗಿದೆ. ಆಫರ್ ಬಂದಾಗ ಹಣದ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿತ್ತು. ಒಂದೂವರೆ ವರ್ಷಗಳ ಹಿಂದೆ ಇವರ ವಿವಾಹ ನಡೆದಿತ್ತು. ಮೃತದೇಹ ಕೋಜಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಯ ಶವಾಗಾರದಲ್ಲಿರಿಸಲಾಗಿದ್ದು , ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

         

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English