ಮಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜಿಲ್ಲಾಧಿಕಾರಿಗಳು ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದ್ದಾರೆ.
16 ಮೇ ಮಧ್ಯಾಹ್ನದ ವರದಿಯ ಪ್ರಕಾರ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 17 ಮತ್ತು 19 ರಂದು ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಅನ್ನು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.
ಮೇ 18 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ 115 ರಿಂದ 205 ಸೆ. ಮೀ ಮಳೆಯಾಗಲಿದೆ.
ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಸಾರ್ವಜನಿಕರು ಮತ್ತು ಮೀನುಗಾರರು ನೀರಿಗೆ ಇಳಿಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.
Click this button or press Ctrl+G to toggle between Kannada and English