ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಜಂಕ್ಷನ್ನಲ್ಲಿ ರಸ್ತೆ ಗುಂಡಿಗಳನ್ನು ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೇ ಕಾಂಕ್ರಿಟ್ ಹಾಕಿ ಮುಚ್ಚಿದ್ದಾರೆ.
ರಸ್ತೆ ಗುಂಡಿಗಳಿಂದಾಗಿ ಜಂಕ್ಷನ್ ನಲ್ಲಿ ಅಪಘಾತಗಳು ಹೆಚ್ಚುತ್ತಿದ್ದು, ಅಲ್ಲದೇ ಟ್ರಾಫಿಕ್ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೇ ಹೊಂಡಗಳಿಗೆ ಕಾಂಕ್ರಿಟ್ ಹಾಕಿ ಮುಚ್ಚಿದ್ದು, ಪೊಲೀಸ್ ಸಿಬ್ಬಂದಿಯ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
ಇಲ್ಲಿನ ದುರವಸ್ಥೆಯನ್ನು ಕಂಡು ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
Click this button or press Ctrl+G to toggle between Kannada and English