ಪಿಲಿಕುಳದ ಮಾನಸ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಒಂದು ದಿನದ ಪ್ರವಾಸ

12:28 PM, Wednesday, May 18th, 2022
Share
1 Star2 Stars3 Stars4 Stars5 Stars
(5 rating, 1 votes)
Loading...

ಮಂಗಳೂರು : ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಮತ್ತು ಕುಟುಂಬ ವರ್ಗಕ್ಕೆ ಮಂಗಳೂರು ನಗರದ ಹೊರ ವಲಯದ ಪಿಲಿಕುಳದ ಮಾನಸ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಮಂಗಳವಾರ ಒಂದು ದಿನದ ಪ್ರವಾಸ ಏರ್ಪಡಿಸಲಾಗಿತ್ತು.

ಪ್ರವಾಸದಲ್ಲಿ 80 ಕ್ಕೂ ಹೆಚ್ಚು ಮಂದಿ ಪತ್ರಕರ್ತರು ಮತ್ತು ಕುಟುಂಬದ ಸದಸ್ಯರು ಭಾಗವಹಿಸಿದ್ದರು. ಸುಮಾರು 14 ಎಕ್ರೆ ವಿಶಾಲ ಪ್ರದೇಶದಲ್ಲಿ ಹರಡಿರುವ ಪಾರ್ಕ್‌ ಪೂರ್ತಿ ಓಡಾಡಿ, ಕುಟುಂಬದ ಸದಸ್ಯರ ಜೊತೆ, ಸಹೋದ್ಯೋಗಿಗಳ ಜೊತೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಕಾಲ ಕಳೆದರು.

ಪತ್ರಕರ್ತರಿಗೆ ಈ ರೀತಿಯ ರಿಪ್ರೆಶ್‌ಮೆಂಟ್ ಕಾರ್ಯಕ್ರಮಗಳನ್ನು ನಿರಂತರ ಹಮ್ಮಿಕೊಳ್ಳುವ ಯೋಚನೆ ಇದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹೇಳಿದ್ದಾರೆ.

ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಪಿಲಿಕುಳ ನಿಸರ್ಗಧಾಮದ ಅಧ್ಯಕ್ಷ ವಿಲ್ಫ್ರೆಡ್, ಆಡಳಿತ ನಿರ್ದೇಶಕ ಜಯೇಶ್ ಅಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾರ್ಕೇಟಿಂಗ್ ಮ್ಯಾನೇಜರ್ ಅರುಣ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ಕಾರ್ಯದರ್ಶಿ ವಿಜಯ್ ಕೋಟ್ಯಾನ್, ಕಾರ್ಯಕಾರಿ ಸಮಿತಿ ಸದಸ್ಯರಾದ ಮಹಮ್ಮದ್ ಆರಿಫ್ ಪಡುಬಿದ್ರೆ, ಸತ್ಯವತಿ, ಶ್ರವಣ್‌ಕುಮಾರ್ ನಾಳ, ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಅಧ್ಯಕ್ಷ ನಾಗರಾಜ್, ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯ್ಲ, ಕಾರ್ಯದರ್ಶಿ ವಿಜಯಕುಮಾರ್, ಬಂಟ್ವಾಳ ಪತ್ರಕರ್ತರ ಸಂಘದ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು.

         

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English