ಮಂಗಳೂರು ಮಹಾನಗರ ಪಾಲಿಕೆಯ ತ್ಯಾಜ್ಯ ನಿರ್ವಹಣೆಯ ಹೊಸ ಟೆಂಡರ್ ರದ್ದುಗೊಳಿಸಿದ ಮೇಯರ್

7:37 PM, Tuesday, September 26th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ಆ್ಯಂಟನಿ ವೇಸ್ಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದ ಬಳಿಕ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಹೊಸ ಟೆಂಡರ್ ರದ್ದುಗೊಳಿಸಲು ಮನಪಾ ಸಾಮಾನ್ಯ ಸಭೆ ನಿರ್ಣಯಿಸಿದೆ. ಮಾತ್ರವಲ್ಲದೆ, ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿ ಹೊಸ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ವಿಶೇಷ ಸಭೆಯಲ್ಲಿ ಅದನ್ನು ಮಂಡಿಸಿ ಮಂಜೂ ರಾತಿ ಪಡೆಯಲು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ತಮ್ಮ ಪ್ರಥಮ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ನಡೆಸುತ್ತಿದ್ದ ಆ್ಯಂಟನಿ ವೇಸ್ಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದ ಹಿನ್ನೆಲೆಯಲ್ಲಿ ಪಾಲಿಕೆಯ 60 ವಾರ್ಡ್‌ಗಳನ್ನು ನಾಲ್ಕು ವಲಯಗಳಾಗಿ ವಿಂಗಡಿಸಿ ಪ್ರತ್ಯೇಕ ಪಾಕೇಜ್‌ಗಳಲ್ಲಿ ಮನೆ ಕಸ ಸಂಗ್ರಹ, ಸಾಗಾಟಕ್ಕೆ ವಾಹನಗಳ ಖರೀದಿ, ಮಾನವ ಸಂಪನ್ಮೂಲ ನಿರ್ವಹಣೆಯೊಂದಿಗೆ ಹೊಸ ಟೆಂಡರ್ ಪಾಲಿಕೆ ವತಿಯಿಂದ ಮಾಡಲಾಗಿತ್ತು. ಆದರೆ ಈ ಈ ನಾಲ್ಕು ಪ್ಯಾಕೇಜ್ ಕೂಡಾ ಅವೈಜ್ಞಾನಿಕವಾಗಿದೆ. ಇದನ್ನು ವಿರೋಧಿಸುವುದಾಗಿ ಪ್ರತಿಪಕ್ಷದ ನಾಯಕರಾದ ಪ್ರವೀಣ್ ಚಂದ್ರ ಆಳ್ವ ಅವರು ಸಭೆಯ ಆರಂಭದಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿದರು.

ಜಾತ್ರೋತ್ಸವ ಸಂದರ್ಭ ತ್ಯಾಜ್ಯ ವಿಲೇಗೆ ಸಂಬಂಧಿಸಿ ಹೊಸ ಟೆಂಡರ್‌ನಲ್ಲಿ ವ್ಯವಸ್ಥೆ ಇಲ್ಲ. ಈಗಾಗಲೇ ಖರೀದಿ ಮಾಡಲಾದ ವಾಹನಗಳು ಪಾಲಿಕೆಯ ಶೇ. 50ರಷ್ಟು ಎತ್ತರದ ರಸ್ತೆಗಳಲ್ಲಿ ಸಂಚಾರಕ್ಕೆ ಯೋಗ್ಯವಾಗಿಲ್ಲ ಎಂದು ಪ್ರೇಮಾನಂದ ಶೆಟ್ಟಿ ವಿರೋಧ ವ್ಯಕ್ತಪಡಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English