ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿಯ ಸೆರೆ

9:34 PM, Tuesday, September 26th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಸಿಸಿಬಿ ಪೊಲೀಸರು ತನ್ನ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ದಸ್ತಗಿರಿ ಮಾಡಿದ್ದಾರೆ.

ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಯುವಕನೊಬ್ಬ ಅಕ್ರಮವಾಗಿ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ  MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಲುಕುಮಾನುಲ್ ಹಕೀಂ ಅಲಿಯಾಸ್  ಹಕೀಂ(22), ವಾಸ: ಇರಂತಮಜಲು ಮನೆ, ಅಜ್ಜಾವರ ಗ್ರಾಮ, ಸುಳ್ಯ ತಾಲೂಕು.  ಖಾಯಂ ವಾಸ:  ರಹಮಾನಿಯಾ ಕಾಂಪ್ಲೆಕ್ಸ್, ಹಳೇ ಗೇಟು, ಸುಳ್ಯ ತಾಲೂಕು, ಹಾಲಿ ವಾಸ:  ಫ್ಲಾಟ್ ನಂಬ್ರ: ಅನಂತ ಕೃಪಾ ಆಪಾರ್ಟ್ ಮೆಂಟ್, ಟಾಟಾ ಶೋರೂಂ ಹಿಂಭಾಗ, ಬಿಜೈ, ಮಂಗಳೂರು. ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  

ಆತನ ವಶದಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,60,000/-ಆಗಬಹುದು. ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈತನು ಮಂಗಳೂರು ನಗರದ ಕಾಲೇಜುವೊಂದರ ಪದವಿ ವಿದ್ಯಾರ್ಥಿಯಾಗಿರುತ್ತಾನೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English