- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್

[1]

ಮಂಗಳೂರು : ದೇಶ ಇತ್ತೀಚಿನ ಆಗುಹೋಗುಗಳ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ, ಚಂದ್ರಯಾನ-3 ಯಿಂದಾಗಿ ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತಾಗಿದ್ದು ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ. ಭಾರತದ ಸಮರ್ಥ ನಾಯಕತ್ವದಡಿಯಲ್ಲಿ ನಡೆದ G20 ಶೃಂಗ ಸಭೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಸಾಮರ್ಥ್ಯ ಸಾಬೀತಾಗಿದ್ದು ಇದು ಸಮರ್ಥ ನಾಯಕತ್ವಕ್ಕೆ ಸಂದ ಗೌರವವಾಗಿದೆ. 33% ಮಹಿಳಾ ಮೀಸಲಾತಿ ಬಗ್ಗೆ ಮಾತನಾಡಿದ ಅವರು ಇದು ಕೆಲ ದಶಕಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಮಹತ್ವದ ಕಾಯ್ದೆಯಾಗಿದ್ದು ಬಗೆಹರಿಸುವ ನಿಟ್ಟಿನಲ್ಲಿ ಸದ್ಯ ಕೇಂದ್ರ ಸರಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್, ಮನಪಾದ ಸದಸ್ಯರು, ಕಮಿಷನರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು