ಉಳ್ಳಾಲ ಸಮೀಪ ನಾಡದೋಣಿ ಮೀನುಗಾರರ ಬಲೆಗೆ ಬಿದ್ದ 75 ಕೆ.ಜಿ. ತೂಕದ ಪಿಲಿ ತೊರಕೆ ಮೀನು

12:51 PM, Thursday, September 28th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಬಲೆಗೆ ಬಿದ್ದಿದೆ .

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.

ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ. ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.

ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ. ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.

ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English