ಕಾವೇರಿ ನೀರು : ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ, 144 ಸೆಕ್ಷನ್​ ಜಾರಿ

2:51 PM, Friday, September 29th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಬೆಂಗಳೂರು: ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳ ಜನರ ಜೀವನಾಡಿ ಕಾವೇರಿ ನೀರನ್ನು ರಾಜ್ಯದಲ್ಲಿ ತೀವ್ರ ಬರಗಾಲದ ಮಧ್ಯೆ ತಮಿಳು ನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಶುಕ್ರವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರುನಾಡು ಬಂದ್ ಗೆ ಬೆಳಗ್ಗೆಯಿಂದಲೇ ಪ್ರತಿಕ್ರಿಯೆ ಕಂಡುಬಂತು.

ರಾಜಧಾನಿ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು ನಗರದ ಸೂಕ್ಷ್ಮ ಮತ್ತು ಪ್ರಮುಖ ಪ್ರದೇಶಗಳಲ್ಲಿ ಕಾವಲಿಗೆ ಇಳಿದಿದ್ದಾರೆ. ಬೆಂಗಳೂರಿನ ವಾಣಿಜ್ಯ, ವ್ಯಾಪಾರ ಚಟುವಟಿಕೆಗಳ ಕೇಂದ್ರ ಭಾಗವಾಗಿರುವ ಕೆಆರ್ ಮಾರುಕಟ್ಟೆಯಲ್ಲಿ ವಿವಿಧ ಸಂಘಟನೆಗಳು ವಿಭಿನ್ನ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ. ಕಿವಿಗೆ ಚೆಂಡು ಹಾಕಿಕೊಂಡು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆ ಮಾಡುವುದಕ್ಕೆ ಅಲರ್ಟ್ ಆದ ಪೋಲಿಸರು, ಪ್ರತಿಭಟಿಸಿತ್ತಿದ್ದವರನ್ನು ಕೆಆರ್​ ಮಾರುಕಟ್ಟೆಯಿಂದ ಹೊರ ಕಳುಹಿಸಿದರು.

ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಸಿಎಂ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ದಾರಿಗಳಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಸಂಜಯ್ ನಗರ ಸರ್ಕಲ್, ಆನಂದ್ ರಾವ್ ಸರ್ಕಲ್, ಆರ್.ಟಿ ನಗರದ ತರಳುಬಾಳು ಜಂಕ್ಷನ್ ಸೇರಿದಂತೆ ಐದಾರು ಕಡೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಎರಡು ಕೆಎಸ್ ಆರ್​​​ಪಿ, ಕಾವೇರಿ ನಿವಾಸದ ಬಳಿ ಒಂದು ಬಿಎಂಟಿಸಿ ಬಸ್, ಒಂದು ಕೆಎಸ್ ಆರ್​​​ಪಿ ತುಕಡಿ ನಿಯೋಜಿಸಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English