ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯಲ್ಲಿ ಯುವಕನ ಶವ ಪತ್ತೆ

7:45 PM, Friday, September 29th, 2023
Share
1 Star2 Stars3 Stars4 Stars5 Stars
(5 rating, 1 votes)
Loading...

ಮುಲ್ಕಿ: ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಯುವಕನ ವಯಸ್ಸು ಸುಮಾರು 19 ರಿಂದ 20 ವರ್ಷದ ಒಳಗೆ ಇರಬಹುದು ಎಂದು ಅಂದಾಜಿಸಲಾಗಿದೆ.

ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English