ಬೆಂಗಳೂರು : ಭಾರತೀಯ ಅಂಚೆ ಇಲಾಖೆಯು ದೇಶದಾದ್ಯಂತ 38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ 2410 ಹುದ್ದೆಗಳನ್ನು ಈ ನೇಮಕಾತಿ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಮೇ 02 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದ್ದು, ಜೂನ್ 05 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಂಚೆ ಇಲಾಖೆಯಲ್ಲಿ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ಮಾಸ್ಟರ್, ಡಾಕ್ ಸೇವಕ್ ಎಂದು ಮೂರು ವಿಧದ ಹುದ್ದೆಗಳಿಗೆ ಮೆರಿಟ್ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ನಿಯೋಜಿಸಲಾಗುತ್ತದೆ.
ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಬಿಪಿಎಂ/ಎಬಿಪಿಎಂ/ ಡಾಕ್ ಸೇವಕ್ ಹುದ್ದೆಗಳಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಉದ್ಯೋಗ ಇಲಾಖೆ : ಭಾರತೀಯ ಅಂಚೆ ಇಲಾಖೆ
ಕರ್ನಾಟಕ ಅಂಚೆ ವೃತ್ತ ಹುದ್ದೆಗಳ ಸಂಖ್ಯೆ : 2410
ಹುದ್ದೆ ಹೆಸರು : ಗ್ರಾಮೀಣ ಡಾಕ್ ಸೇವಕ
ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿಯ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು, ಜೊತೆಗೆ ಆಯಾ ರಾಜ್ಯಗಳ ಸ್ಥಳೀಯ ಭಾಷೆಯ ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು ಹಾಗೂ ಮೀಸಲಾತಿ ಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ ಈ ಕುರಿತ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿರಿ
ವೇತನಶ್ರೇಣಿ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿಯ ಅಧಿಸೂಚನೆಯ ಪ್ರಕಾರ
ಅರ್ಜಿ ಶುಲ್ಕ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿಯ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ ₹100 ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕಾಗಿರುತ್ತದೆ.
ಆಯ್ಕೆ ವಿಧಾನ
ಭಾರತೀಯ ಅಂಚೆ ಇಲಾಖೆಯ ನೇಮಕಾತಿಯ ಅಧಿಸೂಚನೆಯ ಪ್ರಕಾರ ಮೆರಿಟ್ ಪಟ್ಟಿ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-06-2022
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ https://indiapostgdsonline.gov.in/
Click this button or press Ctrl+G to toggle between Kannada and English
May 28th, 2022 at 15:03:10
Motebennur
Tq byadgi
Dis haveri