ಡಿಕೆ ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ : ಬಸವರಾಜ ಬೊಮ್ಮಾಯಿ

10:11 PM, Monday, October 2nd, 2023
Share
1 Star2 Stars3 Stars4 Stars5 Stars
(No Ratings Yet)
Loading...


ಬೆಂಗಳೂರು: ಕಾವೆರಿ ನದಿಗೆ ಬರುತ್ತಿರುವ ಒಳ ಹರಿವಿನ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, . ಡಿ ಕೆ ಶಿವಕುಮಾರ್ ಅವರು ಅತಿ ಹೆಚ್ಚು ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಆದರೆ, ಅಧಿಕಾರಿಗಳಿಂದ ಮಾಹಿತಿ ಪಡೆದಾಗ ಸುಮಾರು 2000 ಕ್ಯೂಸೆಕ್ಸ್ ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಡಿಕೆಶಿವಕುಮಾರ್ ಅವರು ಯಾಕೆ ಜನರ ದಾರಿ ತಪ್ಪಿಸುತ್ತಿದ್ದಾರೆ. ಯಾಕೆ ಇಷ್ಟೊಂದು ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಡಿಸಿಎಂ ಯಾವಾಗಲೂ ಬ್ರಾಂಡ್ ಬೆಂಗಳೂರು ಅಂತ ಭಾಷಣ ಮಾಡಿದರೆ ಸಾಲದು, ಬೆಂಗಳೂರಿಗೆ ಕಾವೇರಿ ನೀರು ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಬ್ಯಾಡ್ ಬೆಂಗಳೂರು ಆಗುತ್ತದೆ ಎಂದರು.

ಸಂಕಷ್ಟ ಸೂತ್ರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2018 ಕ್ಕೂ ಮೊದಲು ಸಂಕಷ್ಟ ಸೂತ್ರ ಜಾರಿಗೊಳಿಸಲು ಈ ಪರಿಸ್ಥಿತಿ ಇರಲಿಲ್ಲ. ಸಿಡಬ್ಲುಎಂಎ ಬಂದ ಮೇಲೆ ನೀರಿನ ಸಮಸ್ಯೆ ಈಗ ಬಂದಿದೆ. ಹೀಗಾಗಿ ಸಂಕಷ್ಟ ಸೂತ್ರ ಜಾರಿ ಮಾಡುವುದು ಅಹತ್ಯವಿದೆ ಎಂದು ಹೇಳಿದರು.

ಈ ಸರ್ಕಾರದಲ್ಲಿ ಗಲಭೆಕೋರರಿಗೆ ಕಾನೂನಿನ ಭಯ ಇಲ್ಲ: ಬಸವರಾಜ ಬೊಮ್ಮಾಯಿ

ಮಂಡ್ಯ : ಕಲ್ಲು ತೂರುವವರು, ಗಲಭೆ ಸೃಷ್ಟಿಸುವವರಿಗೆ ಈ ಸರ್ಕಾರದಲ್ಲಿ ಕಾನೂನಿನ ಭಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಗಲಭೆಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಸಣ್ಣ ಗಲಾಟೆ ಎಂದು ಹೇಳಿರುವುದು ದುರ್ದೈವದ ಸಂಗತಿ. ಮನೆಗಳಿಗೆ ಕಲ್ಲು ತೂರಿದ್ದಾರೆ.

ಕೋಲಾರದಲ್ಲಿಯೂ ಇದೇ ರೀತಿ ಘಟನೆ ನಡೆಯಿತು ಸರ್ಕಾರ ಇಂತಹ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ‌. ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆ ಬಾಲಿಶವಾಗಿದೆ ಎಂದು ಹೇಳಿದರು.

ಸರ್ಕಾರದ ಈ ನಡವಳಿಕೆಯಿಂದಲೇ ಜೂಜುಕೋರರು, ಗಲಭೆಕೋರರು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎಂದರು‌.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English