ನಗರದ ಭವಿಷ್ಯಕ್ಕಾಗಿ ರಸ್ತೆ ಅಗಲೀಕರಣ ಅನಿವಾರ್ಯ. ಜನತೆ ಸಹಕರಿಸಬೇಕು:- ಶಾಸಕ ಕಾಮತ್

6:18 PM, Wednesday, October 4th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ನಗರ ಪ್ರಸ್ತುತ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಜನಸಂಖ್ಯೆಯೂ ಏರುತ್ತಿದ್ದು ವಾಹನ ದಟ್ಟಣೆ ತೀವ್ರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಗರದ ಮುಂದಿನ ಭವಿಷ್ಯಕ್ಕಾಗಿ ಈಗಿನಿಂದಲೇ ಕೆಲವು ಮಾರ್ಪಾಡುಗಳನ್ನು ಮಾಡಿಕೊಂಡು ಸಾಗುವುದು ಅನಿವಾರ್ಯ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಥಳೀಯರಲ್ಲಿ ಮನವಿ ಮಾಡಿದರು.

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉರ್ವಸ್ಟೋರ್ ಜಂಕ್ಷನ್ ನಿಂದ ಅಶೋಕನಗರದ ಹಾಸಟ್ಟಿ ಸರ್ಕಲ್ ವರೆಗಿನ ರಸ್ತೆ ಅಗಲೀಕರಣದ ವಿಷಯದಲ್ಲಿ ಉಂಟಾಗಿದ್ದ ಗೊಂದಲಕ್ಕೆ ಸ್ವತಃ ಶಾಸಕರೇ ಖುದ್ದಾಗಿ ಸ್ಥಳೀಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಲ್ಲಿ ಈಗಾಗಲೇ ಕೆಲವು ಭಾಗಗಳಲ್ಲಿ ರಸ್ತೆ ಅಗಲೀಕರಣವಾಗಿದ್ದು ಹಲವರು ತಮ್ಮ ಜಾಗವನ್ನು ಬಿಟ್ಟುಕೊಡಲು ಒಪ್ಪದ್ದು ಸಮಸ್ಯೆಯಾಗಿತ್ತು. ಈ ಬಗ್ಗೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸ್ಥಳೀಯರೊಂದಿಗೆ ಶಾಸಕರು ಚರ್ಚೆ ನಡೆಸಿ ಜಾಗ ಬಿಟ್ಟುಕೊಡುವಂತೆ ಮನವೊಲಿಸುವ ಪ್ರಯತ್ನ ಮಾಡಿದರು.

ನಮ್ಮೆಲ್ಲರ ಹಾಗೂ ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಮೂಲಭೂತ ಸೌಕರ್ಯಗಳು ಅಭಿವೃದ್ಧಿಯಾಗಬೇಕು. ಅದರಲ್ಲಿ ರಸ್ತೆ ಅಗಲೀಕರಣವೂ ಒಂದು. ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಮುಂದಿನ ಯೋಜನೆ ಸಿದ್ಧಪಡಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಾರ್ಪೊರೇಟರ್ ಗಳಾದ ಜಯಲಕ್ಷ್ಮಿ ಶೆಟ್ಟಿ, ಗಣೇಶ್ ಕುಲಾಲ್, ಸೇರಿದಂತೆ ಇತರ ಮುಖಂಡರುಗಳು ಹಾಗೂ ಅಧಿಕಾರಿಗಳು ಸೇರಿದ್ದರು.

ನಗರದ ಭವಿಷ್ಯಕ್ಕಾಗಿ ರಸ್ತೆ ಅಗಲೀಕರಣ ಅನಿವಾರ್ಯ. ಜನತೆ ಸಹಕರಿಸಬೇಕು:- ಶಾಸಕ ಕಾಮತ್

ಮಂಗಳೂರು ನಗರ ಪ್ರಸ್ತುತ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಜನಸಂಖ್ಯೆಯೂ ಏರುತ್ತಿದ್ದು ವಾಹನ ದಟ್ಟಣೆ ತೀವ್ರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಗರದ ಮುಂದಿನ ಭವಿಷ್ಯಕ್ಕಾಗಿ ಈಗಿನಿಂದಲೇ ಕೆಲವು ಮಾರ್ಪಾಡುಗಳನ್ನು ಮಾಡಿಕೊಂಡು ಸಾಗುವುದು ಅನಿವಾರ್ಯ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಥಳೀಯರಲ್ಲಿ ಮನವಿ ಮಾಡಿದರು.

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉರ್ವಸ್ಟೋರ್ ಜಂಕ್ಷನ್ ನಿಂದ ಅಶೋಕನಗರದ ಹಾಸಟ್ಟಿ ಸರ್ಕಲ್ ವರೆಗಿನ ರಸ್ತೆ ಅಗಲೀಕರಣದ ವಿಷಯದಲ್ಲಿ ಉಂಟಾಗಿದ್ದ ಗೊಂದಲಕ್ಕೆ ಸ್ವತಃ ಶಾಸಕರೇ ಖುದ್ದಾಗಿ ಸ್ಥಳೀಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಲ್ಲಿ ಈಗಾಗಲೇ ಕೆಲವು ಭಾಗಗಳಲ್ಲಿ ರಸ್ತೆ ಅಗಲೀಕರಣವಾಗಿದ್ದು ಹಲವರು ತಮ್ಮ ಜಾಗವನ್ನು ಬಿಟ್ಟುಕೊಡಲು ಒಪ್ಪದ್ದು ಸಮಸ್ಯೆಯಾಗಿತ್ತು. ಈ ಬಗ್ಗೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸ್ಥಳೀಯರೊಂದಿಗೆ ಶಾಸಕರು ಚರ್ಚೆ ನಡೆಸಿ ಜಾಗ ಬಿಟ್ಟುಕೊಡುವಂತೆ ಮನವೊಲಿಸುವ ಪ್ರಯತ್ನ ಮಾಡಿದರು.

ನಮ್ಮೆಲ್ಲರ ಹಾಗೂ ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಮೂಲಭೂತ ಸೌಕರ್ಯಗಳು ಅಭಿವೃದ್ಧಿಯಾಗಬೇಕು. ಅದರಲ್ಲಿ ರಸ್ತೆ ಅಗಲೀಕರಣವೂ ಒಂದು. ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಮುಂದಿನ ಯೋಜನೆ ಸಿದ್ಧಪಡಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಾರ್ಪೊರೇಟರ್ ಗಳಾದ ಜಯಲಕ್ಷ್ಮಿ ಶೆಟ್ಟಿ, ಗಣೇಶ್ ಕುಲಾಲ್, ಸೇರಿದಂತೆ ಇತರ ಮುಖಂಡರುಗಳು ಹಾಗೂ ಅಧಿಕಾರಿಗಳು ಸೇರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English