ಎಚ್ಚರ ! ಲವ್ ಜಿಹಾದ್‍ನಂತಹ ಕೃತ್ಯಗಳಿಗೆ ಮುಸ್ಲಿಂ ಮುಖಂಡರು ಸಹಕಾರ ಕೊಡುತ್ತಿದ್ದಾರೆ : ಶರಣ್ ಪಂಪ್‍ವೆಲ್

8:18 PM, Tuesday, May 31st, 2022
Share
1 Star2 Stars3 Stars4 Stars5 Stars
(No Ratings Yet)
Loading...

ಕುಂದಾಪುರ : ಲವ್ ಜಿಹಾದ್‍ನಂತಹ ಕೃತ್ಯಗಳಿಗೆ ಮುಸ್ಲಿಂ ಮುಖಂಡರು ಸಹಕಾರ ಕೊಡುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಲವ್ ಜಿಹಾದ್ ಮೂಲಕ ಇಸ್ಲಾಂಗೆ ಮತಾಂತರ ನಡೆಸುವ ಕೃತ್ಯ ನಡೆಯುತ್ತಲೆ ಬಂದಿದೆ. ಹಿಂದೂ ಸಮಾಜ ಜಾಗೃತವಾಗಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ಹೇಳಿದರು.

ಶಿಲ್ಪಾಳದ್ದು ಆತ್ಮಹತ್ಯೆಯಲ್ಲ, ಜಿಹಾದಿಗಳ ಕೌರ್ಯದಿಂದ ನಡೆದ ಕೊಲೆ ಮತ್ತೆ ಮತ್ತೆ ಇಂತಹ ಘಟನೆಗಳು ಕಾಶ್ಮೀರ, ಕೇರಳದಂತೆ ಈ ಭಾಗದಲ್ಲಿಯೂ ನಡೆಯುತ್ತಿದೆ ಎಂದು ಹೇಳಿದರು.

ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಡುಪಿ ಜಿಲ್ಲೆ, ಕುಂದಾಪುರ ಪ್ರಖಂಡದವತಿಯಿಂದ ನಡೆದ ಲವ್ ಜಿಹಾದ್ ವಿರುದ್ಧ ಬೃಹತ್ ಪ್ರತಿಭಟನೆ, ಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಜಿಹಾದಿಗಳು ಇಂತಹ ಚಟುವಟಿಕೆಗಳನ್ನು ಮುಂದುವರಿಸಿದರೆ ತಕ್ಕ ಉತ್ತರ ಹಿಂದೂ ಸಮಾಜ ನೀಡಲಿದೆ ಎಂದರು.

ಶಿಲ್ಪಾಳ ಜೀವ ತ್ಯಾಗದ ಬಳಿಕ ನಮ್ಮ ಹಿಂದೂ ಹೆಣ್ಣು ಮಕ್ಕಳು ಎಚ್ಚೆತ್ತುಕೊಳ್ಳಬೇಕಾಗಿದೆ. ಜಿಹಾದಿಗಳ ಷಡ್ಯಂತ್ರವನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಶರಣ್ ಪಂಪ್‍ವೆಲ್ ಹೇಳಿದರು.

ಶಿಲ್ಪಾಳ ಸಾವಿನ ಬಗ್ಗೆ ಬಗ್ಗೆ ಉನ್ನತ ತನಿಖೆಯಾಗಬೇಕು. ಇದರ ಹಿಂದೆ ಯಾವ ಸಂಘಟನೆಯ ಕೈವಾಡ ಇದೆ ಎನ್ನುವುದು ಬಹಿರಂಗವಾಗಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಲ್ಲಿದ್ದೇವೆ. ಉನ್ನತ ಮಟ್ಟದ ತನಿಖೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದರು.

ಆರೋಪಿ ಅಜೀಜ್‍ನ ಬಂಧನವಾದರೆ ಸಾಲದು, ಆತನ ಪತ್ನಿ ಸಲ್ಮಾಳ ಬಂಧನವಾಗಬೇಕು. ಮೃತ ಶಿಲ್ಪ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಈ ಸಂದರ್ಭದಲ್ಲಿ ಸರ್ಕಾರವನ್ನುಅವರುಒತ್ತಾಯಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English