ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪತ್ನಿ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

1:00 PM, Monday, October 9th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಸುಬ್ರಹ್ಮಣ್ಯ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರು ಇಂದು ಬೆಳ್ಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆಡಿದ್ದಾರೆ.

ಭಾನುವಾರ ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ದೇವೇಗೌಡರ ಕುಟುಂಬ ಆ.9ರ ಸೋಮವಾರ ಬೆಳಗ್ಗೆ ದೇವರ ದರ್ಶನ ಪಡೆದು, ಕ್ಷೇತ್ರದಲ್ಲಿ ಇಂದು ವಿವಿಧ ಸೇವೆ ನೆರವೇರಿಸಲಿದ್ದಾರೆ.

ದೇವೇಗೌಡರು ನಿನ್ನೆ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ ಮತ್ತು ಕುಕ್ಕೆ ಸುಬ್ರಹ್ಮಣ್ಯ ಕಡೆಗಳಲ್ಲಿ ದಟ್ಟವಾದ ಮೋಡ ಕವಿದ ವಾತಾವರಣವಿದ್ದ ಹಿನ್ನೆಲೆ ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಬಳಿಕ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಇಲ್ಲಿ ವಾಸ್ತವ್ಯ ಹೂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English