ವಿಶ್ವ ಹಿಂದು ಪರಿಷತ್‌ನ 60ನೇ ವರ್ಷಾಚರಣೆ, ಮಂಗಳೂರು ನಗರಕ್ಕೆ ಶೌರ್ಯ ರಥ ಯಾತ್ರೆ ಪ್ರವೇಶ

10:19 PM, Monday, October 9th, 2023
Share
1 Star2 Stars3 Stars4 Stars5 Stars
(5 rating, 1 votes)
Loading...

ಮಂಗಳೂರು : ವಿಶ್ವ ಹಿಂದು ಪರಿಷತ್‌ನ 60ನೇ ವರ್ಷಾಚರಣೆ ಪ್ರಯುಕ್ತ ದೇಶಾದ್ಯಂತ ಯುವ ಸಂಘಟನೆಯಾದ ಬಜರಂಗದಳ ನೇತೃತ್ವದಲ್ಲಿ ಶೌರ್ಯ ರಥ ಯಾತ್ರೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ 1600 ಕಿ.ಮೀ. ಸಂಚರಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ನಡೆಸಿ ಇದೀಗ ಕರಾವಳಿ ಜಿಲ್ಲೆ ಪ್ರವೇಶಿಸಿದ್ದು, ಪುತ್ತೂರು ಮತ್ತು ಬಂಟ್ವಾಳದಲ್ಲಿ ಯಶಸ್ವಿ ಸಮಾವೇಶಗಳನ್ನು ನಡೆಸಿ ಇದೀಗ ಮಂಗಳೂರು ನಗರ ಪ್ರವೇಶಿಸಿದೆ.

ನಗರದ ಹೊರವಲಯದ ಅಡ್ಯಾರಿನಲ್ಲಿ ರಥಕ್ಕೆರ ಭವ್ಯ ಸ್ವಾಗತ ಕೋರಲಾಯಿತು. ಸಂಜೆ 4.30ಕ್ಕೆ ನಗರದ ಜ್ಯೋತಿ ವೃತ್ತದಿಂದ ಶೌರ್ಯ ರಥ ಯಾತ್ರೆ ಸಾಗಿ ಕದ್ರಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಿತು. ಕರಿಂಜೆ ಮುಕ್ತಾನಂದ ಸ್ವಾಮೀಜಿ ಯವರಿಂದ ಆಶೀರ್ವಚನ ನಡೆಯಿತು. ಚಿಂತಕ ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡಿದರು. ವಿಹೆಚ್‌ಪಿ, ಬಜರಂಗದಳದ ನಾಯಕರು ಸಮಾವೇಶದಲ್ಲಿ ಪಾಲ್ಗೊಂಡರು .

ಸ್ಟಾಲಿನ್ ನಂತಹ ಹಲವಾರು ಮಂದಿ ಹಿಂದೂ ಧರ್ಮದ ಮೇಲೆ ಈ ಹಿಂದೆ ದಾಳಿ ಮಾಡಿದರೂ ಭಾರತ ವನ್ನು ಏನೂ ಮಾಡಲು ಸಾಧ್ಯವಾಗಿಲ್ಲ, ಹಿಂದೂ ಧರ್ಮದ ವೀರ ಶೂರರು ಹೋರಾಡಿ ಭಾರತವನ್ನು ಉಳಿಸಿಕೊಂಡಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಸೆ.25 ರಂದು ಚಿತ್ರದುರ್ಗದಲ್ಲಿ ಆರಂಭವಾದ ಶೌರ್ಯ ರಥ ಯಾತ್ರೆ ನಾಳೆ ಸಂಜೆ 4 ಗಂಟೆಗೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಮೂಲಕ ಸಮಾರೋಪಗೊಳ್ಳಲಿದೆ. ಸಾಯಿರಾಧ ಗ್ರೂಪ್ಸ್ ಉಡುಪಿಯ ಮನೋಹರ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಅದಮಾರು ಮಠದ ಈಶಪ್ರಿಯ ತೀರ್ಥರು, ಮಧ್ಯಪ್ರದೇಶದ ಅಖಿಲೇಶ್ವರಾನಂದ ಮಹಾರಾಜ್, ಇವರು ಸಾನ್ನಿಧ್ಯ ವಹಿಸಲಿದ್ದಾರೆ. ವಿಎಚ್‌ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್, ರಾಷ್ಟ್ರೀಯ ಸಹಸಂಯೋಜಕ ಸೂರ್ಯನಾರಾಯಣ ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English