ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ, ಲಕ್ಷಾಂತರ ರೂಪಾಯಿ ನಷ್ಟ

3:41 PM, Tuesday, October 10th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಗರದ ಹಳೆಬಂದರು (ದಕ್ಕೆ) ಬಳಿ ಮಂಗಳವಾರ ಮುಂಜಾನೆ ನಡೆದಿದೆ.

ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಇತರ ಬೋಟ್ ಗಳಿಗೆ ಬೆಂಕಿ‌ ಹರಡುವುದನ್ನು ತಪ್ಪಿಸಲಾಗಿದೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪಾಂಡೇಶ್ವರ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.

‘ಲಂಗರು ಹಾಕಿದ್ದ ದೋಣಿಯಲ್ಲಿದ್ದ ಡೀಸೆಲ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ಆದರೆ ಹಗ್ಗ ಬಿಚ್ಚಿ ಬಿಟ್ಟಿದ್ದರಿಂದ ದೋಣಿ ಕೆಲವು ದೂರ ನೀರಿನಲ್ಲಿ ಸಾಗಿತ್ತು. ಹಾಗಾಗಿ ಇತರ ದೋಣಿಗಳಿಗೆ ಬೆಂಕಿ ತಗುಲುವುದು ತಪ್ಪಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English