ಭಜನೆ ಬಂದವರಿಗೆ ಚೂರಿ ತೋರಿಸಿ, ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

2:26 PM, Wednesday, October 11th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಬೆಳ್ತಂಗಡಿ : ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಭಜನೆ ಮಾಡಲು ಬಂದವರಿಗೆ ಚೂರಿ ತೋರಿಸಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿರುವ ವ್ಯಕ್ತಿಯೊಬ್ಬನನ್ನು ಪೋಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುಂಡೂರಿನ ಆನಂದ ಆಚಾರ್ಯ (38) ಎಂದು ಗುರುತಿಸಲಾಗಿದೆ.

ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಮಂಗಳವಾರ ರಾತ್ರಿ ವಲಯ ಮಟ್ಟದ ಜಿನ ಭಜನಾ ಸ್ಪರ್ದೆಗೆ ಮಹಿಳೆಯರು,ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆತ್ತಿದ್ದರು.ಈ ಸಂದರ್ಭ ಅಲ್ಲಿಗೆ ಬಂದ ಈತ ಚೂರಿ ತೋರಿಸಿ, ಬೊಬ್ಬೆ ಹಾಕಿ ಬೆದರಿಕೆ ಹಾಕಿದ್ದು ಕೂಡಲೇ ಸ್ಥಳಿಯರು ವೇಣೂರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಆಗಮಿಸಿದ ಪೋಲೀಸರು ಚೂರಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English