ಬೆಂಗಳೂರು : ಎತ್ತಿನಹೊಳೆ ಯೋಜನೆ 2012 ರಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರಿನ ಕೊರತೆ ನೀಗಿಸಲೆಂದು ರೂಪುಗೊಂಡಿತು. ಎತ್ತಿನ ಹೊಳೆ ಯೋಜನೆ ಪೂರ್ಣಗೊಳಿಸುವ ಜವಾಬ್ದಾರಿ ನಮ್ಮದು. ಭೂ ಸ್ವಾಧೀನ ಕಾರ್ಯಕ್ಕೆ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರಕ್ರಿಯೆ ಮುಗಿದ ಕೂಡಲೇ ಕಾಮಗಾರಿಗಳು ತ್ವರಿತಗೊಳಿಸಿ ಬಯಲುಸೀಮೆಗೆ ನೀರನ್ನು ತರುವ ಕೆಲಸ ಮಾಡಲಾಗುವುದು. ಒಂದೂವರೆ ವರ್ಷದಲ್ಲಿ 24 ಟಿಎಂಸಿ ನೀರಿನ ಬಳಕೆ ಮಾಡಲು ಸಾಧ್ಯವಾಗಲಿದೆ. ಹೊಸಕೋಟೆಗೂ ಎತ್ತಿನಹೊಳೆ ನೀರು ತಲುಪಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು .
ಅವರು ಇಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ, ಸವಲತ್ತುಗಳನ್ನು ವಿತರಿಸಿ ಮಾತನಾಡುತ್ತಿದ್ದರು.
ಸಮಗ್ರ ಅಭಿವೃದ್ಧಿಯತ್ತ ಹೊಸಕೋಟೆ ದಾಪುಗಾಲು
ಈ ಬಾರಿಯ ಆಯವ್ಯಯದಲ್ಲಿ ಎರೆಮಲ್ಲಪ್ಪನ ಕೆರೆ ಸಂಪೂರ್ಣ ಅಭಿವೃದ್ಧಿಗೆ ಬಜೆಟ್ ನಲ್ಲಿ ಅನುದಾನ ಒದಗಿಸಿದೆ. ಹೊಸಕೋಟೆಗೆ ಕೆರೆ ತುಂಬಿಸುವ ಯೋಜನೆ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಈ ವರ್ಷದಲ್ಲಿ ಮಂಜೂರಾತಿಯನ್ನು ನೀಡಲಾಗುವುದು. ಆನಗೊಂಡ ಹೋಬಳಿಯಲ್ಲಿ 39 ಕೆರೆ ತುಂಬುವ ಯೋಜನೆಯ ಕಾಮಗಾರಿ ನಡೆದಿದೆ. ಅದಕ್ಕೆ ಹೆಚ್ಚುವರಿಯಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಆದಷ್ಟು ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಸಮಗ್ರ ಅಭಿವೃದ್ಧಿಯತ್ತ ಹೊಸಕೋಟೆ ದಾಪುಗಾಲು ಹಾಕುತ್ತಿದೆ ಎಂದರು.
Click this button or press Ctrl+G to toggle between Kannada and English