ಮಂಗಳೂರು : ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಈಗಾಗಲೇ ಮನವಿ ಮಾಡುತ್ತಿದ್ದು ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದರು.
ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡುವ ಬಗ್ಗೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರವನ್ನು ಆಗ್ರಹಿಸಿದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಯಶಸ್ವಿಯಾಗಿದ್ದನ್ನು ಸ್ಮರಿಸಬಹುದು.
Click this button or press Ctrl+G to toggle between Kannada and English