ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಶಾರದೇ ಸಹಿತ ನವ ದುರ್ಗೆಯರ ಪ್ರತಿಷ್ಠಾಪನೆ

12:58 PM, Monday, October 16th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಮತ್ತು ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಮಹಾಗಣಪತಿ, ಶಾರದೆ, ಆದಿಶಕ್ತಿಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿ ಪ್ರತಿಷ್ಠಾಪನೆ ಪೂಜೆ ರವಿವಾರ ಜರುಗಿತು.

ಗಣಪತಿ, ಆದಿಶಕ್ತಿ ಮತ್ತು ನವದುರ್ಗೆಯರನ್ನು ತಂದ ಬಳಿಕ ದೇವಸ್ಥಾನದಲ್ಲಿ ಗುರುಪ್ರಾರ್ಥನೆ, ಕಲಶ ಪ್ರತಿಷ್ಠೆ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿಸಲಾಯಿತು. ಬಳಿಕ ಸ್ಯಾಕ್ಸ್‌ಫೋನ್ ತಂಡ, ಬ್ಯಾಂಡ್, ಚೆಂಡೆ ತಂಡ, ಹುಲಿ ವೇಷದೊಂದಿಗೆ ಶಾರದೆ ಮೂರ್ತಿಯನ್ನು ದೇವಾಲಯಕ್ಕೆ ಪ್ರದಕ್ಷಿಣೆ ಹಾಕಿ ಬಳಿಕ ಪ್ರತಿಷ್ಠಾಪನೆ ನಡೆಯಿತು. ಮಹಾಪೂಜೆ ಬಳಿಕ ಅನ್ನಪ್ರಸಾದ ನಡೆಯಿತು.

ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ರೂವಾರಿ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಮಾಧ್ಯಮದ ಜತೆ ಮಾತನಾಡಿ, ಮಂಗಳೂರು ದಸರಾ ನಿಜವಾಗಿಯೂ ಜನರ ದಸರಾ ಅನ್ನುವುದಕ್ಕೆ ಮೊದಲ ದಿನದ ಜನರೇ ಸಾಕ್ಷಿ. ಎಲ್ಲವೂ ಗೋಕರ್ಣನಾಥ ದೇವರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಗ್ರಹಗಳಿಂದ ನಡೆಯುತ್ತಿದೆ. ನವರಾತ್ರಿ, ದಸರಾ ಎಲ್ಲರಿಗೂ ಶುಭ ತರಲಿ ಮತ್ತು ಪ್ರತಿಯೊಬ್ಬರು ಈ ದಸರಾ ವೈಭವ ವೀಕ್ಷಿಸಬೇಕಾಗಿದೆ ಎಂದರು.

ಈ ಸಂದರ್ಭ ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ, ಮಾಲತಿ ಜೆ. ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಜಯಾನಂದ ಅಂಚನ್, ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್ ಕುಮಾರ್, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಟ್ರಸ್ಟಿಗಳಾದ ಶೇಖರ್ ಪೂಜಾರಿ, ರವಿಶಂಕರ ಮಿಜಾರು, ಜಗದೀಪ್ ಡಿ. ಸುವರ್ಣ, ಕೆ. ಮಹೇಶ್ಚಂದ್ರ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಅಧ್ಯಕ್ಷೆ ಡಾ. ಅನಸೂಯ ಬಿ.ಟಿ. ಸಾಲ್ಯಾನ್, ಡಾ.ಬಿ.ಜಿ. ಸುವರ್ಣ,ಹರಿಕೃಷ್ಣ ಬಂಟ್ವಾಳ್, ರಾಧಾಕೃಷ್ಣ, ಕಿಶೋರ್ ದಂಡೆಕೇರಿ, ಲೀಲಾಕ್ಷ ಕರ್ಕೇರಾ, ಚಂದನ್‌ದಾಸ್, ಗೌರವಿ ರಾಜಶೇಖರ್, ಬ್ರಿಜೇಶ್ ಚೌಟ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English