ಕುಡ್ಲದ ಪಿಲಿಪರ್ಬ-2023ರ ಚಪ್ಪರ ಮುಹೂರ್ತ ಕಾರ್ಯಕ್ರಮ

1:09 PM, Monday, October 16th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಭಾನುವಾರ ಮುಂಜಾನೆ ಜರುಗಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈಗ ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಅಕ್ಟೋಬರ್ 21 ರ ಶನಿವಾರದಂದು ನಡೆಯಲಿರುವ ದ್ವಿತೀಯ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 15 ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು ಹಾಗೂ ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸುವ ಎಲ್ಲರಿಗೂ ಸುಸ್ವಾಗತ, ಒಟ್ಟಾರೆಯಾಗಿ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಮ. ನ. ಪಾ. ಸದಸ್ಯರುಗಳಾದ ಶಕೀಲಾ ಖಾವ, ಜಯಲಕ್ಷ್ಮಿ, ಭರತ್ ಸೂಟರ್ ಪೇಟೆ, ಹಾಗೂ ನರೇಶ್ ಶೆಣೈ , ಉದಯ ಪೂಜಾರಿ, ಅಶ್ವಿತ್ ಕೊಟ್ಟಾರಿ, ಲಲಿತ್ ರಾಜ್ ಮೆಂಡನ್, ಕಮಲಾಕ್ಷ ಬಜಿಲ್ಕೇರಿ, ಮೋಹನ್ ಪೂಜಾರಿ, ಜಗದೀಶ್ ಕದ್ರಿ, ಚೇತನ್ ಕಾಮತ್, ಸೂರಜ್ ಕಾಮತ್, ಮುಂತಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English