ಹಾಸನ: ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹಾಸನದಲ್ಲಿ ಗುರುವಾರ ಹಾಸನದಲ್ಲಿ ನಡೆದಿದೆ.
ಮೂಲತಃ ಚನ್ನರಾಯಪಟ್ಟಣ ಸಮೀಪದ ಹೊನ್ನ ಶೆಟ್ಟಿಹಳ್ಳಿ ಗ್ರಾಮದ ಮಾನ್ಯ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ.
ಹಾಸನ ನಗರದ ಹೊರವಲಯದಲ್ಲಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದಳು.
ಪರೀಕ್ಷೆಯಲ್ಲಿ ನಕಲು ಮಾಡಿ ಉಪನ್ಯಾಸಕರ ಕೈಗೆ ಸಿಕ್ಕಿ ಬಿದ್ದಿದಳು. ಈ ಹಿನ್ನೆಲೆಯಲ್ಲಿ ಕ್ಷಮಾಪಣಾ ಪತ್ರ ಬರೆದು ಪ್ರಾಂಶುಪಾಲರಿಗೆ ನೀಡುವಂತೆ ಆಕೆಗೆ ಉಪನ್ಯಾಸಕರು ತಿಳಿಸಿದ್ದರು ಎನ್ನಲಾಗಿದೆ. ಮತ್ತು ಇದರಿಂದ ನನ್ನ ಮರ್ಯಾದೆ ಹಾಳಾಯ್ತಲ್ಲ ಎಂಬ ಕಾರಣಕ್ಕೆ ಆಕೆ ಮೊದಲು ಕಾಲೇಜಿನ ಪ್ರಾಂಶುಪಾಲಕ ಕೊಠಡಿಗೆ ಬಂದು ಬಳಿಕ ಕಾಲೇಜು ಕಟ್ಟಡದ 5ನೇ ಮಹಡಿ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಕಷ್ಟಪಟ್ಟು ಮಗಳನ್ನು ಎಂಜಿನಿಯರಿಂಗ್ ಕಾಲೇಜಿಗೆ ಸೇರಿಸಿ ಆಕೆಯ ಭವಿಷ್ಯದ ಬಗ್ಗೆ ನಿರೀಕ್ಷೆಯನ್ನು ಇರಿಸಿಕೊಂಡಿದ್ದ ಹೆತ್ತವರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.
ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿನಿ ಪೋಷಕರಿಗೂ ಸರಿಯಾದ ಮಾಹಿತಿಯನ್ನು ನೀಡದೆ ಸತ್ಯವನ್ನು ಮರೆಮಾಚಲು ನಮಗೇನು ಗೊತ್ತಿಲ್ಲ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿ ಪೋಷಕರನ್ನು ಸಮಾಧಾನಪಡಿಸಿದ್ದರು ಎನ್ನಲಾಗಿದೆ.
ಪ್ರಕರಣದ ಸಂಬಂಧ ವಿದ್ಯಾರ್ಥಿಗಳು ತಕ್ಷಣ ಹಾಸನದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಬಡಾವಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
Click this button or press Ctrl+G to toggle between Kannada and English