ನವೆಂಬರ್ 5 : ಬುಡನ್‌ಗಿರಿಯಲ್ಲಿ ದತ್ತಮಾಲಾ‌ ಅಭಿಯಾನ‌ : 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ​

9:02 PM, Saturday, November 4th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಚಿಕ್ಕಮಗಳೂರು: ನವೆಂಬರ್ 5 ರಂದು ಗುರು ದತ್ತಾತ್ರೇಯ, ಬಾಬಾ ಬುಡನ್‌ಸ್ವಾಮಿ‌ ದರ್ಗಾದಲ್ಲಿ ದತ್ತಮಾಲಾ‌ ಅಭಿಯಾನ‌ ನಡೆಯಲಿದೆ. ಈ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ‌ ಬಂದೋಬಸ್ತ್ ಮಾಡಲಾಗಿದೆ.

ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ‌ ದರ್ಗಾ ಸೇರಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಜಿಲ್ಲೆಯ ಗಡಿಭಾಗ ಸೇರಿ 26 ಚೆಕ್‌ಪೋಸ್ಟ್, 49 ಸೆಕ್ಟರ್ ಆಫೀಸರ್ ನೇಮಿಸಲಾಗಿದೆ. ಸೂಕ್ಷ್ಮ‌, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ, ಡ್ರೋನ್‌ ಕಣ್ಗಾವಲು ಇರಿಸಿದ್ದು, ಮುನ್ನೆಚ್ಚರಿಕೆಯಿಂದ ಚಿಕ್ಕಮಗಳೂರಿನ M.G.ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪೊಲೀಸರಿಂದ ಪಥಸಂಚಲನ ಮಾಡಲಾಗಿದೆ.

ಜಿಲ್ಲಾಧಿಕಾರಿಗಳ ಆದೇಶದನ್ವಯ ವಾಹನಗಳ ಚಲನವಲನಗಳನ್ನು ನಿರ್ಬಂಧಿಸಲಾಗಿದ್ದು, ನಗರದಲ್ಲಿ ಶೋಭಾ ಯಾತ್ರೆ ನಡೆಯುವ ನವೆಂಬರ್ 5 ರಂದು ಬೆಳಗ್ಗೆ 6 ರಿಂದ ಸಂಜೆ 5 ರ ವರೆಗೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಸಾಗುವ ವಾಹನಗಳು ರತ್ನಗಿರಿ ರಸ್ತೆಯಲ್ಲಿ ಸಂಚರಿಸಬೇಕಾಗುತ್ತದೆ. ಎಂಜಿ ರಸ್ತೆಯಲ್ಲಿ ಸಂಚರಿಸಬೇಕಾದ ವಾಹನಗಳು ಮಾರ್ಕೆಟ್ ರಸ್ತೆ ಮತ್ತು ಐಜಿ ರಸ್ತೆಗಳಲ್ಲಿ ಸಂಚರಿಸಬೇಕಾಗುತ್ತದೆ. ನವೆಂಬರ್ 5 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ವರೆಗೆ ಶೋಭಾಯಾತ್ರೆ ನಡೆಯುವ ಮಾರ್ಗದಲ್ಲಿ ಎಲ್ಲಾ ರೀತಿಯ ವಾಹನ ಸಂಚಾರ ಹಾಗೂ ನಿಲುಗಡೆಯನ್ನು ನಿಷೇಧಿಸಿ ಜೊತೆಗೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ. ನವೆಂಬರ್ 5 ರಂದು ಚಿಕ್ಕಮಗಳೂರು ನಗರದ ಕೆ.ಎಂ. ರಸ್ತೆಯಲ್ಲಿ ಸಂಚರಿಸುವ ಭಾರಿ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಚಿಕ್ಕಮಗಳೂರು ನಗರ, ದತ್ತಪೀಠ, ಸುತ್ತಮುತ್ತಲಿನ ಸೂಕ್ಷ್ಮ ಸ್ಥಳಗಳು ಹಾಗೂ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಜನರು ಹಾಗೂ ವಾಹನಗಳ ಚಲನ ವಲನಗಳ ಮೇಲೆ ನಿಗಾ ವಹಿಸಲಾಗಿದೆ. ಅಲ್ಲದೆ ಅಂತಹ ಸ್ಥಳಗಳಲ್ಲಿ ವಿಡಿಯೋ ಗ್ರಾಫರ್ ಗಳು ಮತ್ತು ಡ್ರೋನ್ ಕ್ಯಾಮೆರಾ ಗಳನ್ನು ಬಳಸಿ ಕಣ್ಗಾವಲು ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನವೆಂಬರ್ 4 ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 6 ರ ಬೆಳಿಗ್ಗೆ 10 ಗಂಟೆಯವರೆಗೆ ಐಡಿ ಪೀಠ,ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಹೊನ್ನಮ್ಮನ ಹಳ್ಳ, ಗಾಳಿಕೆರೆ ಹಾಗೂ ಮಾಣಿಕ್ಯದಾರ ಈ ಸ್ಥಳಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.ಐಡಿ ಪೀಠಕ್ಕೆ ತೆರಳುವ ಎಲ್ಲಾ ಉದ್ದನೆಯ ಚಾಸಿಸ್ ವುಳ್ಳ ವಾಹನಗಳ ಸಂಚಾರವನ್ನು ನಿಷೇಧಸಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English