ಮಂಗಳೂರು: ಕರ್ನಾಟಕ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ವಾದಿರಾಜ ಕೆ.ಎ(51) ಬೊಂದೇಲ್ನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಹೊಟ್ಟೆ ಮತ್ತುಕುತ್ತಿಗೆ ಮೇಲೆ ಚೂರಿ ಇರಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ನಗರ ಹೊರವಲಯದ ಬೊಂದೇಲ್ನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್ನ ಜನರಲ್ ಮ್ಯಾನೇಜರ್ ಪತ್ತೆಯಾಗಿದ್ದು, ಇದೊಂದು ಕೊಲೆ ಯತ್ನವೋ ಅಥವಾ ತಾವೇ ಆತ್ಮಹತ್ಯೆ ಮಾಡಿಕೊಂಡರೋ ಎನ್ನುವ ಬಗ್ಗೆ ಸಂಶಯ ಮೂಡಿದೆ.
ವಾದಿರಾಜ ಅವರ ಪತ್ನಿ ಮಕ್ಕಳು ಹೊರಗಡೆ ಹೋಗಿದ್ದಾಗ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಾದಿರಾಜ ಆಚಾರ್ಯ ಒಂದು ವರ್ಷದಿಂದ ಇಲ್ಲಿ ಬಾಡಿಗೆ ಮನೆಯಲ್ಲಿದ್ದರು. ಕರ್ನಾಟಕ ಬ್ಯಾಂಕ್ನಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿ, ನಾಲ್ಕು ವರ್ಷದಿಂದ ಕೆಲಸ ಮಾಡುತ್ತಿದ್ದರು. ಇಂದು ವಾದಿರಾಜ ಅವರ ಹೆಂಡತಿ ಮಕ್ಕಳ ಜೊತೆ ಶಾಲೆಯಲ್ಲಿ ಪೋಷಕರ ಸಭೆಗೆ ತೆರಳಿದ್ದರು. ಈ ವೇಳೆ ವಾದಿರಾಜ ಒಬ್ಬರೇ ಮನೆಯಲ್ಲಿದ್ದರು, ವಾದಿರಾಜ ಎಷ್ಟು ಹೊತ್ತಾದರೂ ಬರದೇ ಇದ್ದಾಗ ಕಾರು ಚಾಲಕ ಮನೆಗೆ ಬಂದು ನೋಡಿದಾಗ ವಾದಿರಾಜ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅಪಾರ್ಟ್ಮೆಂಟ್ನಲ್ಲಿದ್ದವರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೆಚ್ಚಿನ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಾದಿರಾಜ ಮನೆಯವರು ನೀಡುವ ದೂರಿನ ಮೇಲೆ ಎಫ್.ಐ.ಆರ್ ದಾಖಲು ಮಾಡುತ್ತೇವೆ. ಮರಣೋತ್ತರ ಪರೀಕ್ಷೆ ನಡೆಯುವುದು ಇನ್ನೂ ಬಾಕಿಯಿದೆ. ಆ ಬಳಿಕ ಯಾವ ಕಾರಣಕ್ಕೆ ಈ ಸಾವಾಗಿದೆ ಎಂದು ಹೇಳಬಹುದು. ಚಾಕುವಿನಿಂದ ಹೊಟ್ಟೆ ಮತ್ತು ಕುತ್ತಿಗೆ ಮೇಲೆ ಕೊಯ್ದಿರುವ ಗಾಯವಿದೆ. ದೂರಿನ ಆಧಾರದಲ್ಲಿ ತನಿಖೆ ಮಾಡುತ್ತೇವೆ. ಈಗಾಗಲೇ ಸಿಸಿಟಿವಿ ಫೂಟೇಜ್ ಎಲ್ಲಾ ಚೆಕ್ ಮಾಡಿದ್ದೇವೆ. ಆ ಸಂದರ್ಭ ಫೋನ್ನಲ್ಲಿ ಯಾರೆಲ್ಲಾ ಮಾತನಾಡಿದ್ದಾರೆ ಎಂದು ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು.
Click this button or press Ctrl+G to toggle between Kannada and English