ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿ ನಾಯಕ ಬಿಎಲ್ ಸಂತೋಷ್ ಅವರಿಗೆ ಬಿವೈ ವಿಜಯೇಂದ್ರ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ನನ್ನ ಮುಂದೆ ಲೋಕಸಭೆ ಚುನಾವಣೆ ಇದೆ. ಅದನ್ನು ಸವಾಲಾಗಿ ಸ್ವೀಕರಿಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಬಿ.ವೈ ವಿಜಯೇಂದ್ರರವರನ್ನು ಬೆಂಗಳೂರಿನಲ್ಲಿ ಶಾಸಕರುಗಳಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಹರೀಶ್ ಪೂಂಜಾರವರು ಭೇಟಿಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕುಮಾರ್ ಆಳ್ವಾರವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English