ಮನೆಯೊಳಗೆ ನುಗ್ಗಿ ನಾಲ್ವರ ಭೀಕರ ಹತ್ಯೆ, ನಾಲ್ಕು ಬಾರಿ ವಾಹನ ಬದಲಿಸಿ ಕೊಲೆಗಾರ ತಪ್ಪಿಸಿಕೊಂಡಿದ್ದ

2:01 PM, Tuesday, November 14th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಉಡುಪಿ : ನೇಜಾರುವಿನ ತೃಪ್ತಿ ನಗರದಲ್ಲಿ ಮನೆಯೊಳಗೆ ನುಗ್ಗಿ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದು ಚಾಲಾಕಿ ಹಂತಕ ತಪ್ಪಿಸಿಕೊಳ್ಳಲು ನಾಲ್ಕು ಬಾರಿ ವಾಹನ ಬದಲಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಭಾನುವಾರ ನವೆಂಬರ್ 12 ರಂದು ಒಂದೇ ಕುಟುಂಬದ ಮೂಲತಃ ಕೋಡಿಬೆಂಗ್ರೆಯ ಪ್ರಸ್ತುತ ನೇಜಾರು ನಿವಾಸಿಗಳಾದ ಹಸೀನಾ (48) ಮತ್ತು ಅವರ ಮಕ್ಕಳಾದ ಮಂಗಳೂರಿನಲ್ಲಿ ಲಾಜಿಸ್ಟಿಕ್ಸ್ ಒಂದರಲ್ಲಿ ಕೆಲಸದಲ್ಲಿರುವ ಅಫ್ನಾನ್ (23), ಏರ್ ಇಂಡಿಯಾದಲ್ಲಿ ಉದ್ಯೋಗಿಯಾಗಿರುವ ಅಯ್ನಾಝ್ (21) ಹಾಗೂ 8 ನೇ ತರಗತಿಯ ಅಸೀಮ್(12) ಎಂಬವರನ್ನು ಭೀಕರವಾಗಿ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿತ್ತು.

ಪ್ರಾಥಮಿಕ ತನಿಖೆಯಲ್ಲಿ ಪ್ರಮುಖ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕಿದ್ದು, ಕೇವಲ 15 ನಿಮಿಷಗಳಲ್ಲಿ ಹತ್ಯೆ ಮಾಡಿದ ಬೋಳು ತಲೆಯ ವ್ಯಕ್ತಿ ಹಣಕಾಸಿನ ವ್ಯವಹಾರದ ಪೂರ್ವದ್ವೇಷದಲ್ಲಿ ಕೊಲೆ ಮಾಡಿದ್ದಾನೆ ಎಂದು ಅಂದಾಜಿಸಲಾಗಿದೆ.

ಆರೋಪಿಯು ಕೊಲೆ ಮಾಡಿದ ಬಳಿಕ ಪೊಲೀಸರಿಗೆ ತನ್ನ ಸುಳಿವು ಸಿಗದಂತೆ ಉಡುಪಿ ನಗರದೊಳಗೆ ನಾಲ್ಕು ಬಾರಿ ವಾಹನ ಬದಲಾಯಿಸಿ ಪರಾರಿಯಾಗಿದ್ದಾನೆ. ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಯಾವುದೇ ಮಹತ್ವದ ಸುಳಿವು ದೊರೆತಿಲ್ಲ.

ಆತನ ಬಂಧನಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಐದು ತಂಡಗಳನ್ನು ರಚನೆ ಮಾಡಿದ್ದು, ಪೊಲೀಸರು ಬೇರೆ ಬೇರೆ ಜಿಲ್ಲೆಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.

ಘಟನೆಯಲ್ಲಿ ಚಾಕು ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹಾಜಿರಾ ಎನ್ನುವ ಮಹಿಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English