ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯುವ ನಾಯಕ ಬಿ ವೈ ವಿಜಯೇಂದ್ರ ಅಧಿಕಾರ ಸ್ವೀಕಾರ

2:07 PM, Wednesday, November 15th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಬೆಂಗಳೂರು : ಬಿಜೆಪಿಯ ಶಕ್ತಿ ಕೇಂದ್ರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ, ಯುವ ನಾಯಕ ಬಿ ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಭುಧವಾರ ಅಧಿಕಾರ ಸ್ವೀಕರಿಸಿಕೊಂಡರು.

ರಾಜ್ಯ ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಮುಂದೆ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಜಯೇಂದ್ರ ಅವರಿಗೆ ಕೇಸರಿ ಶಾಲು ತೊಡಿಸಿ ಸನ್ಮಾನಿಸಿ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

ಇದಕ್ಕೂ ಮುನ್ನ ವಿಜಯೇಂದ್ರ ಅವರು ತಂದೆ ಯಡಿಯೂರಪ್ಪನವರ ಕಾಲಿಗೆ ನಮಸ್ಕರಿಸಿ ಬಿಜೆಪಿ ಕಚೇರಿಯಲ್ಲಿ ಹೋಮ,ಹವನ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ, ವಿ ಗೋಪಾಲಯ್ಯ, ಆದರ ಜ್ಞಾನೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಪಕ್ಷ ಸಂಘಟನೆಗಾಗಿ ನಾವೆಲ್ಲ ವಿಜಯೇಂದ್ರ ಜತೆ ಇರುತ್ತೇವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಎಸ್​.ಆರ್.ವಿಶ್ವನಾಥ್​ ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನೂ ಗೆಲ್ಲಲು ಸಿದ್ಧತೆ ನಡೆದಿದೆ. ಈಗಾಗಲೇ ಬಿ.ವೈ.ವಿಜಯೇಂದ್ರ ಪ್ರವಾಸ ಶುರು ಮಾಡಿದ್ದಾರೆ. ನಾವೆಲ್ಲ ಉತ್ಸಾಹದಿಂದ ಅವರ ಜತೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದರು.

ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರುವುದು ಖುಷಿ ತಂದಿದೆ ಎಂದು ಬೆಂಗಳೂರಿನಲ್ಲಿ ಬಿ.ವೈ.ವಿಜಯೇಂದ್ರ ಸಹೋದರಿ ಅರುಣಾದೇವಿ ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ತಂದೆ ಆ ಕಾಲದಲ್ಲೇ ಪಕ್ಷ ಸಂಘಟನೆಗಾಗಿ ಹೋರಾಟ ಮಾಡಿದ್ರು. ಈಗ ಬಿ.ವೈ.ವಿಜಯೇಂದ್ರಗೆ ಪಕ್ಷದ ನಾಯಕರು ಜವಾಬ್ದಾರಿ ನೀಡಿದ್ದಾರೆ. ರಾಜ್ಯದ ಜನರು ಬಿ.ವೈ.ವಿಜಯೇಂದ್ರ ಜೊತೆ ಇದ್ದಾರೆ. ವಿಜಯೇಂದ್ರ ಅಧಿಕಾರ ಸ್ವೀಕರಿಸ್ತಿರೋದು ಕುಂಟುಂಬದ ಸಂಭ್ರಮವಲ್ಲ. ಒಂದು‌ ಸಮಾಜದ ಸಂಭ್ರಮ, ಪ್ರತಿಯೊಬ್ಬ ಕಾರ್ಯಕರ್ತರ ಸಂಭ್ರಮ ಎಂದರು.

ಬಿಜೆಪಿಯಲ್ಲಿ ಪ್ರಮುಖ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಅಸಮಾಧಾನಿತರು ಎಂದು ಗುರುತಿಸಿಕೊಂಡಿರುವ ವಿ ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಮಧ್ಯ ಪ್ರದೇಶ ಚುನಾವಣೆ ಪ್ರಚಾರದಲ್ಲಿರುವ ಸಿ ಟಿ ರವಿಯವರು ಅಲ್ಲಿಂದಲೇ ವಿಜಯೇಂದ್ರ ಅವರಿಗೆ ಶುಭಕೋರಿದ್ದಾರೆ.

ವಿಡಿಯೋ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English