ಉಡುಪಿ ನೇಜಾರಿನಲ್ಲಿ ನಾಲ್ವರ ಬರ್ಬರ ಹತ್ಯೆ, ಶಂಕಿತ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು

2:29 PM, Wednesday, November 15th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಉಡುಪಿ : ಸಿಸಿಟಿವಿ ದೃಶ್ಯಾವಳಿ ಹಾಗೂ ಫೋನ್ ಕರೆಗಳ ದಾಖಲೆಗಳ ಆಧಾರದ ಮೇಲೆ ಉಡುಪಿ ಯಲ್ಲಿ ಮೂವರು ಮಕ್ಕಳು ಸೇರಿದಂತೆ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಭಂದಿಸಿದಂತೆ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಓರ್ವ ವ್ಯಕ್ತಿ ಬೆಳಗಾವಿಯಲ್ಲಿ ವಶಕ್ಕೆ ಪಡೆದು ಉಡುಪಿಗೆ ಕರೆ ತರಲಾಗುತ್ತಿದೆ.

ವಶಕ್ಕೆ ಪಡೆದ ಶಂಕಿತನನ್ನು ಪ್ರವೀಣ್ ಅರುಣ್ ಚೌಗಲೆ ಎಂದು ಗುರುತಿಸಲಾಗಿದೆ.

ಆತನ ಚಹರೆ, ಎತ್ತರ ಮತ್ತು ಫೋನ್ ಲೊಕೇಶನ್ ಹೊಂದಿಕೆಯಾಗಿದೆ. ಇದರಿಂದ ಆತನನ್ನು ಪೊಲೀಸರು ವಶಕ್ಕೆ ಪಡೆದು ಉಡುಪಿಗೆ ಕರೆ ತರುತ್ತಿದ್ದಾರೆ. ಮೃತಪಟ್ಟ ಹಸೀನಾ ಅವರ ಎರಡನೇ ಪುತ್ರಿಯಾಗಿರುವ ಆಯ್ನಾಝ್ ಮತ್ತು ಚೌಗಲೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಹಳೆಯ ಪರಿಚಿತರು ಕೂಡ ಹೌದು ಎಂದು ತಿಳಿದು ಬಂದಿದೆ. ಹತ್ಯೆಯಾದ ಬಳಿಕ ಪ್ರವೀಣ್ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿದ್ದ. ಈ ಕಾರಣಕ್ಕೆ ಆತನ ಮೇಲೆ ಅನುಮಾನ ಜಾಸ್ತಿಯಿದೆ.

ಆರೋಪಿ ಪೂನದಲ್ಲಿ ಪೊಲೀಸ್ ಸಿಬ್ಬಂದಿಯಾಗಿದ್ದ ಆತ ಮೂರು ತಿಂಗಳು ಪೊಲೀಸ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿದ್ದ ಆದರ ನಂತರ ರಾಜೀನಾಮೆ ನೀಡಿದ್ದನು.

ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಇಲ್ಲಿಯವರೆಗೂ ಶಂಕಿತನ ಚಹರೆ ಹೋಲುವ 10ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಘಟನೆ ನಡೆದ ದಿನವೇ ಉಡುಪಿ ಎಸ್‍ಪಿ ಡಾ.ಅರುಣ್ ಸೂಚನೆಯಂತೆ ಪ್ರಕರಣದ ತನಿಖೆಗೆ 5 ತಂಡಗಳನ್ನು ರಚನೆ ಮಾಡಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳ ಬೆನ್ನತ್ತಿರುವ ಪೊಲೀಸರು ಉಡುಪಿ, ಮಂಗಳೂರು, ಶಿವಮೊಗ್ಗ, ಕೇರಳದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿ ಕೃತ್ಯ ಎಸಗಿದ ವ್ಯಕ್ತಿಯ ಚಹರೆ ಹೋಲುವವರನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರ ಒಂದು ತಂಡ ಕೇರಳದ ಕೊಚ್ಚಿಯಲ್ಲಿ ಓರ್ವ ಶಂಕಿತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಮಾಡಿದೆ. ಉಡುಪಿ, ಶಿವಮೊಗ್ಗ, ದಾವಣಗೆರೆಯಲ್ಲಿ ಸಂಶಯಾಸ್ಪದ ವ್ಯಕ್ತಿಗಳ ಮೇಲೆ ನಿಗಾವಹಿಸಿ ಚಲನವಲನ ಗಮನಿಸಿ ವಿಚಾರಣೆ ಮಾಡಿದ್ದಾರೆ.

ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ನ.12ರಂದು ಬೆಳಗ್ಗೆ ಹಸೀನಾ( 48), ಮಕ್ಕಳಾದ ಅಫ್ನಾನ್ (23), ಅಯ್ನಾಝ್ (20) ಮತ್ತು ಅಸೀಮ್ (14) ಎಂಬವರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಚೂರಿ ಇರಿತಕ್ಕೊಳಗಾಗಿದ್ದ ಮೃತ ಹಸೀನಾ ಅವರ ಅತ್ತೆ ಹಾಜಿರಾ ಹಂತಕನಿಂದ ತಪ್ಪಿಸಿಕೊಂಡು ಶೌಚಾಲಯದೊಳಗೆ ಅವಿತು ಜೀವ ಉಳಿಸಿಕೊಂಡಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English