ಉಡುಪಿ : ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಪ್ರವೀಣ್ ಅರುಣ್ ಚೌಗುಲೆ ಯನ್ನು ಪೊಲೀಸರು ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಮುಂದೆ ಹಾಜರುಪಡಿಸಲಾಗಿದ್ದು, ಒಂದನೇ ಹೆಚ್ಚುವರಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ಪೊಲೀಸರು ಆರೋಪಿ ಅರುಣ್ ಚೌಗುಲೆಗೆ 14 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ನ. 28ರ ವರೆಗೆ ಆರೋಪಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.
ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿತ್ತು ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ. ಈ ಪ್ರಕರಣದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ ಪಿ ಡಾ ಅರುಣ್ ಕೆ, ಪ್ರವೀಣ್ ಚೌಗುಲೆ ಕೊಲೆಯನ್ನು ಒಪ್ಪಿಕೊಂಡಿದ್ದಾರೆ.ಕೊಲೆಗೆ ಕಾರಣ ವಿಚಾರಣೆಯಲ್ಲಿ ಪಡೆದುಕೊಳ್ಳುತ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಇದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ.
ಅವನ ಉದ್ದೇಶ ಅಯ್ನಾಝ್ ಕೊಲೆ ಮಾಡುವುದಾಗಿತ್ತು. ತಪ್ಪಿಸಿಕೊಳ್ಳಲು ಎಲ್ಲರನ್ನೂ ಕೊಲೆ ಮಾಡಿದ್ದಾನೆ. ಕೊಲೆ ಸಾಕ್ಷಿ ನಾಶ ಮಾಡಲು ಮೂವರ ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿತ್ತು ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ. ತನಿಖೆಯಿಂದ ಸಂಪೂರ್ಣ ಮಾಹಿತಿ ಸಿಗಲಿದೆ ಎಂದರು.
Click this button or press Ctrl+G to toggle between Kannada and English