ಲೇಡಿಗೋಶನ್ ಆಸ್ಪತ್ರೆಗೆ ಪೆಟ್ರೋಲಿಯಂ ಖಾತೆ ಸಚಿವ ಎಂ.ವೀರಪ್ಪ ಮೊಯ್ಲಿ ಭೇಟಿ

2:09 PM, Monday, January 14th, 2013
Share
1 Star2 Stars3 Stars4 Stars5 Stars
(No Ratings Yet)
Loading...

Ladygoschen Hospitalಮಂಗಳೂರು : ಸರಕಾರಿ ಲೇಡಿಗೋಶನ್ ಆಸ್ಪತ್ರೆಯ ಹೊಸ ಕಟ್ಟಡಕ್ಕೆ ಫೆಬ್ರವರಿ 9ರಂದು ಶಿಲಾನ್ಯಾಸ ನಡೆಸಲಾಗುವುದು ಎಂದು ಪೆಟ್ರೋಲಿಯಂ ಖಾತೆ ಸಚಿವ ಎಂ.ವೀರಪ್ಪ ಮೊಯ್ಲಿ ಹೇಳಿದರು. ಲೇಡಿಗೋಶನ್ ಆಸ್ಪತ್ರೆಯ ನಾನಾ ವಾರ್ಡ್‌ಗಳಿಗೆ ಮತ್ತು ಹೊಸ ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ಒಎನ್‌ಜಿಸಿ- ಎಂಆರ್‌ಪಿಎಲ್ ನೀಡಿರುವ 21 ಕೋಟಿ ರೂಪಾಯಿ ನೆರವಿನಿಂದ ಹೊಸ ಕಟ್ಟಡವನ್ನು ನಿರ್ಮಿಸಲಾಗುವುದು ಒಂದು ವೇಳೆ ಹೆಚ್ಚಿನ ಹಣ ಅಗತ್ಯಬಿದ್ದರೆ, ಬೇರೆ ಕಂಪನಿಗಳಿಂದ ಹೊಂದಿಸಲಾಗುವುದು. ಜನವರಿ 16ರಂದು ಟೆಂಡರ್ ಪೂರ್ವ ಸಭೆ ಹಾಗೂ ಜನವರಿ 28ರಂದು ಟೆಂಡರ್ ತೆರೆಯಲಾಗುವುದು. ಟೆಂಡರ್ ಪ್ರಕ್ರಿಯೆ ಬಳಿಕ, ಫೆಬ್ರವರಿ 9ರಂದು ಶಿಲಾನ್ಯಾಸ ನೆರವೇರಿಸಿ ತಕ್ಷಣ ಕಾಮಗಾರಿ ನಡೆಸಲು ಸೂಚಿಸಿ ಅದನ್ನು ಎರಡು ವರ್ಷದಲ್ಲಿ ಮುಗಿಸಲು ಸೂಚನೆ ನೀಡಲಾಗುವುದು ಎಂದರು.

ಕರಾವಳಿಯಲ್ಲಿ ಹಲವು ವರ್ಷಗಳಿಂದ ಬಡ ವರ್ಗದ ಮಹಿಳೆಯರ ಹೆರಿಗೆ ಚಿಕಿತ್ಸೆಗೆ ಪ್ರಮುಖ ಆಸ್ಪತ್ರೆಯಾಗಿರುವ ಈ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸಲಾಗಿದ್ದು, ಅದು ಸಾಕಾರಗೊಳ್ಳುವ ಕಾಲ ಸನ್ನಿಹಿತವಾಗಿದೆ. ಪ್ರಸ್ತುತ 250 ಹಾಸಿಗೆ ಮಾತ್ರವಿದ್ದು, ಇದನ್ನು 500 ಹಾಸಿಗೆಗೆ ವಿಸ್ತರಿಸಲಾಗುವುದು, ಪಾರ್ಕಿಂಗ್, ವಿಶ್ರಾಂತಿ ಕೊಠಡಿ, ಕುಡಿಯುವ ನೀರು ಮೊದಲಾದ ಸೌಲಭ್ಯ ಗಳನ್ನು ಒದಗಿಸಲಾಗುವುದು ಎಂದರು.

ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಎಂ.ಎಂ.ಶಕುಂತಳಾ, ಆಸ್ಪತ್ರೆಯ ಹಿರಿಯ ವೈದ್ಯಕೀಯ ಅಧಿಕಾರಿ ಡಾ.ಗೀತಾಂಜಲಿ ಎಂ.ಶೆಟ್ಟಿ, ಹಿರಿಯ ವೈದ್ಯಕೀಯ ತಜ್ಞ ಡಾ.ರಮೇಶ್ ಕವರಿ, ಟೆಂಡರ್ ಪ್ರಕ್ರಿಯೆ ನಡೆಸುತ್ತಿರುವ ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜೇಂದ್ರ ಕಲ್ಬಾವಿ ಪೂರಕ ಮಾಹಿತಿ ನೀಡಿದರು. ಕಾಂಗ್ರೆಸ್ ಮುಖಂಡರಾದ ಐವನ್ ಡಿಸೋಜ, ಕೆ.ಅಶ್ರಫ್, ಶಶಿಧರ ಹೆಗ್ಡೆ, ಡಿ.ಕೆ.ಅಶೋಕ್ ಕುಮಾರ್, ಜೆ.ಆರ್.ಲೋಬೊ ಮತ್ತಿತರರು ಜತೆಗಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English