ಪುರಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ

12:39 PM, Tuesday, June 21st, 2022
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜೂ.21ರ ಮಂಗಳವಾರ ಬೆಳಿಗ್ಗೆ ಜಿಲ್ಲಾಡಳಿತ, ಆಯುಷ್ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗದಿನಾಚರಣೆಗೆ ಶಾಸಕರಾದ ವೇದವ್ಯಾಸ ಕಾಮತ್ ಅವರು ಚಾಲನೆ ನೀಡಿದರು.

ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಅಲೆಮಾರಿ/ಅರೆ ಅಲೆಮಾರಿ‌ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಮಹಮ್ಮದ್ ಇಕ್ಬಾಲ್, ನೆಹರೂ ಯುವ ಕೇಂದ್ರದ ರಘುವೀರ್ ಸೂಟರ್ ಪೇಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದರು.

ಯೋಗ ಗುರುಗಳಾದ ಗೋಪಾಲ ಕೃಷ್ಣ ದೇಲಂಪಾಡಿ ಅವರು ಯೋಗಾಸನದ ವಿವಿಧ ಭಂಗಿಗಳನ್ನು ವಿವರಿಸುತ್ತಾ, ಯೋಗಾಭ್ಯಾಸ ಮಾಡಿಸಿದರು.

ಆಯುಷ್ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಹಲವು ಯೋಗ ಸಂಘಟನೆಗಳ ಯುವಕ-ಯುವತಿಯರು, ಯೋಗ ಪ್ರಿಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

         

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English