ಸಹಾಕಾರಿ ಆಂದೋಲನ ಎಲ್ಲರ ಆಂದೋಲನವಾಗಬೇಕು : ಕೆ. ಎನ್. ರಾಜಣ್ಣ

6:50 PM, Saturday, November 18th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ.ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ.ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳು ಸಹಯೋಗದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಶನಿವಾರ ನಗರದ ಉರ್ವ ಮೈದಾನ ದಲ್ಲಿ ನಡೆಯಿತು.

ಸಹಕಾರ ಸಪ್ತಾಹವನ್ನು ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ ಉದ್ಘಾಟಿಸಿದರು

ಉದ್ಘಾಟನೆ ಬಳಿಕ ಮಾತನಾಡಿದ ಅವರು ಸಹಕಾರಿ ಆಂದೋಲನದಲ್ಲಿ ಯುವಕರು, ಮಹಿಳೆಯರು ಎಲ್ಲರೂ ಸೇರಿ ಜನರ ಆಂದೋಲನವಾಗಿ ಬೆಳೆಯಬೇಕಾಗಿದೆ ಎಂದು ಹೇಳಿದರು.

ಸಹಾಕಾರಿ ಆಂದೋಲನ ಎಲ್ಲಾ ವರ್ಗದ ಜನರು ಪಕ್ಷಾತೀತವಾಗಿ, ಜಾತಿ, ಧರ್ಮ ಮೀರಿದ ಜನರ ಆಂದೋಲನವಾಗಬೇಕು ಎನ್ನುವುದು ನಮ್ಮ ಗುರಿಯಾಗಿದೆ ದೇಶದ ಆರ್ಥಿಕ ಅಭಿವೃದ್ಧಿಯಾಗಬೇಕಾದರೆ ಹಳ್ಳಿ ಗಾಡಿನ ಜನರ ಆರ್ಥಿಕ ಶಕ್ತಿ ಬಲಗೊಳ್ಳಬೇಕಾಗಿದೆ. ಆಗ ಜಿಡಿಪಿ ವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಬೇಸಾಯ ಮಾಡುವ ಕುಟುಂಬಗಳಿಗೆ, ಸ್ವ ಸಹಾಯ ಸಂಘಗಳಿಗೆ ಸಹಕಾರ ಕ್ಷೇತ್ರದ ಮೂಲಕ ಸಾಲ ಸಹಾಯ ದೊರೆಯ ಬೇಕಾಗಿದೆ.ರೈತರ ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿಕೊಡಲು ಸಹಕಾರ ಕ್ಷೇತ್ರ ಬಲ ನೀಡಬೇಕಾಗಿದೆ ಎಂದು ರಾಜಣ್ಣ ವಿವರಿಸಿದರು.

ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಮಾನ್ಯ ಅಧ್ಯಕ್ಷರಾದ ಜಿ. ಟಿ. ದೇವೇಗೌಡ ನೆರವೇರಿಸಿ ಶುಭ ಹಾರೈಸಿದರು.

ಸಂಸದ ನಳಿನ್‌ಕುಮಾರ್ ಕಟೀಲ್, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಶುಭ ಹಾರೈಸಿದರು.

ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರಾದ ಡಾ ಎಂ.ಎನ್.ರಾಜೇಂದ್ರ ಕುಮಾರ್‌ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ವೇದವ್ಯಾಸ ಕಾಮತ್, ಯಶ್ಫಾಲ್ ಸುವರ್ಣ,ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉದ್ಯಮಿ ರೋಹನ್ ಮೊಂತೆರೊ ಹಾಗೂ ದಕ್ಷಿಣ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉದ್ಯಮಿ ರೋಹನ್ ಮೊಂತೆರೊ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರಾದ ಕೆ. ಪಿ. ಸುಚರಿತ ಶೆಟ್ಟಿ ಅವರು ಗೌರವ ಅತಿಥಿ ಗಳಾಗಿ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English