ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಶಿಕ್ಷಕರಿಂದ ಅರ್ಜಿ ಆಹ್ವಾನ

10:46 AM, Thursday, June 23rd, 2022
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : 2022-23ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪುದು ಗ್ರಾಮದ ಮೌಲಾನಾ ಆಜಾದ್ ಮಾದರಿ ಶಾಲೆಗೆ ವಿಜ್ಞಾನ ಮತ್ತು ಗಣಿತ ಶಿಕ್ಷಕರು ಹಾಗೂ ಗುರುಕಂಬಳ ಗ್ರಾಮದ ಮೌಲಾನಾ ಆಜಾದ್ ಮಾದರಿ ಶಾಲೆಗೆ ವಿಜ್ಞಾನ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಬಿ.ಎಸ್ಸಿ, ಬಿ.ಎಡ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಜೂ.30ರೊಳಗೆ ತಮ್ಮ ಸ್ವ-ವಿವರವನ್ನು ನಗರದ ಪಾಂಡೇಶ್ವರದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

         

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English