ಬಂಟ್ವಾಳ : ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ತೀವ್ರ ಜ್ವರದಿಂದ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ.
ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದು,ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾಳೆ
ಆರಾಧ್ಯ ಆಚಾರ್ಯ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದು, ಬಾಲಕಿಯ ಸಾವಿಗೆ ಶಾಲೆಯ ಆಡಳಿತಮಂಡಳಿ, ಶಿಕ್ಷಕ ವೃಂದ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಗೌರವಾರ್ಥ ಶಾಲೆಗೆ ಗುರುವಾರ ರಜೆ ಸಾರಲಾಗಿತ್ತು.
Click this button or press Ctrl+G to toggle between Kannada and English