ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವ್ಯಕ್ತಿಯೋರ್ವ ಫೇಸ್ ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ ಮಾಡಿದ್ದು, ಆತನ ವಿರುದ್ದ ಸುಮೋಟೊ ಕೇಸ್ ದಾಖಲಿಸಲಾಗಿದೆ.
ಹಫೀಜ್ ಮೊಹಮದ್ ಎಂಬಾತ ತನ್ನ ಫೇಸ್ಬುಕ್ ಖಾತೆಯಲ್ಲಿ, ”ಪ್ರಿಪರೇಶನ್ ಇಲ್ಲದೇ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು” ಎಂದು ಪೋಸ್ಟ್ ಮಾಡಿದ್ದಾನೆ.
ಈತನ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಸಂಬಂಧ ಪೋಸ್ಟ್ ಹಿನ್ನೆಲೆ ಐಪಿಸಿ 155, 505(2) ಕಾಯ್ದೆಯಡಿ ಸುಮೋಟೊ ಕೇಸ್ ದಾಖಲಿಸಿ ಪ್ರಕರಣ ದಾಖಲಿಕೊಂಡಿದ್ದಾರೆ.
Click this button or press Ctrl+G to toggle between Kannada and English