ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು ಅದರ ಕ್ರಯ ಪತ್ರವನ್ನು ಇಂದು ಬೆಂಗಳೂರಿನಲ್ಲಿ ಹಸ್ತಾಂತರಿಸಿದರು.
ಇಂದು ರೇಸ್ ಕೋರ್ಸ್ ನಿವಾಸದಲ್ಲಿ ಡಾ. ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದ ಕರಾರು ಪತ್ರ ನೀಡಿದರು.
ನಾಡಪ್ರಭು ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ಜೆ ಸೆಕ್ಟರ್ ನಲ್ಲಿ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ.
ಕೆಲವು ದಿನಗಳ ಹಿಂದೆ ಡಾ. ಸಾಲುಮರದ ತಿಮ್ಮಕ್ಕ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು.
Click this button or press Ctrl+G to toggle between Kannada and English