ಅತ್ತಾವರದ ಐವರಿ ಟವರ್‌ ನ 12 ನೇ ಮಹಡಿಯಲ್ಲಿ ಬೆಂಕಿ, ಓರ್ವ ಮಹಿಳೆ ಮೃತ್ಯು

5:19 PM, Tuesday, November 28th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ನಗರದ ಅತ್ತಾವರದ ಐವರಿ ಟವರ್‌ ಫ್ಲ್ಯಾಟ್ ನಲ್ಲಿ ನಡೆದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಸಹೈನ್ ಮುಸಾಬ್ (57) ಮೃತಪಟ್ಟ ಮಹಿಳೆ.

ಮಂಗಳವಾರ ಮುಂಜಾನೆ 4 ಗಂಟೆಯ ಹೊತ್ತಿಗೆ ಬಹುಮಹಡಿ ಫ್ಲ್ಯಾಟ್ ನ 12 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ, ಮನೆಯಲ್ಲಿದ್ದ ಇತರರು ಹೊರ ಬಂದಿದ್ದರು. ಆದರೆ ಮುಸಾಬ್ ಶೌಚಾಲಯದೊಳಗಿದ್ದ ಕಾರಣ ಹೊರಬರಲಾಗದೇ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಒಂಭತ್ತು ಮಂದಿ ಇದ್ದ ಫ್ಲ್ಯಾಟ್‌ನಲ್ಲಿ ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ. ಮನೆಯೊಳಗಿದ್ದ ಪೀಠೋಪಕರಣಗಳು ಸುಟ್ಟು ಕರಕಲಾಗಿದೆ, ಅಪಾರ ನಷ್ಟ ಸಂಭವಿಸಿದ್ದು ಪಾಂಡೇಶ್ವರ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English