ನ.30 ರಂದು ಪುತ್ತೂರಿನಲ್ಲಿ ಸಹಕಾರಿಗಳ ‘‘ಜಿಲ್ಲಾ ಮಟ್ಟದ ಕ್ರೀಡಾಕೂಟ’’

9:12 PM, Tuesday, November 28th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ಸಹಕಾರ ಸಂಘಗಳ ಸದಸ್ಯರುಗಳನ್ನು, ಸಿಬ್ಬಂದಿ ವರ್ಗವನ್ನು ಹಾಗೂ ನವೋದಯ ಸ್ವ- ಸಹಾಯ ಸಂಘಗಳ ಸದಸ್ಯರುಗಳನ್ನು, ಪ್ರೇರಕರನ್ನು ಮತ್ತು ಬ್ಯಾಂಕಿನ ಸಿಬ್ಬಂದಿಗಳು ಸೇರಿದಂತೆ ಎಲ್ಲರನ್ನೂ ಒಂದೇ ಕಡೆ ಒಗ್ಗೂಡಿ ಸುವ ಉದ್ದೇಶವನ್ನಿಟ್ಟುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ (ರಿ.), ಮಂಗಳೂರು ಇದರ ಸಹಭಾಗಿತ್ವದಲ್ಲಿ ‘‘ಜಿಲ್ಲಾ ಮಟ್ಟದ ಕ್ರೀಡಾಕೂಟ’’ವನ್ನುನ.30ನೇ ಗುರುವಾರ ಪೂರ್ವಾಹ್ನ 9 ಗಂಟೆಗೆ ಪುತ್ತೂರು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜುನಲ್ಲಿ ಹಮ್ಮಿಕೊಂಡಿದೆ ಎ೦ದು ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಇಂದು ಸುದ್ದಿಗೋಷ್ಠಿ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಈ ಕ್ರೀಡಾಕೂಟದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಸಹಕಾರ ಸಚಿವ ಕೆ. ಎನ್. ರಾಜಣ್ಣರವರು ನೆರವೇರಿಸಲಿರುವರು. ಕರ್ನಾಟಕ ಸರಕಾರದ ಮಾನ್ಯ ಆರೋಗ್ಯಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿರುವರು. ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಇವರು ಕ್ರೀಡಾ ಜ್ಯೋತಿ ಪ್ರಜ್ವಲನೆ ಮಾಡಲಿರುವರು. ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್‌ಕುಮಾರ್ ಕಟೀಲು ಇವರು ಮೆರವಣಿಗೆಯ ಉದ್ಘಾಟನೆ ಮಾಡಲಿರುವರು ಎಂದವರು ವಿವರಿಸಿದರು.

ಗ್ರಾಮೀಣಾಭಿವೃದ್ಧಿಯ ಮೂಲ ಸೆಲೆಯಾಗಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಂಘಗಳು ಹಾಗೂ ಗ್ರಾಮೀಣ ಮಟ್ಟದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವನವೋದಯ ಸ್ವ-ಸಹಾಯ ಸಂಘಗಳ ಸದಸ್ಯರುಗಳ ಕ್ರೀಡಾ ವಿಕಸನಕ್ಕೆ ಪ್ರ್ರೇತ್ಸಾಹ ನೀಡುವ ನಿಟ್ಟಿನಲ್ಲಿ ಈ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟದಲ್ಲಿ ಮಹಿಳೆಯರಿಗೆ ಹಾಗೂ ಪುರುಷರಿಗೆ 100 ಮೀಟರ್ ಓಟ, ಗುಂಡು ಎಸೆತ ಹಾಗೂ ಹಗ್ಗ-ಜಗ್ಗಾಟ ಸ್ಪರ್ಧೆಗಳು ನಡೆಯಲಿದೆ. ಸಹಕಾರಿ ಸಂಘಗಳ ಸದಸ್ಯರು, ಸಿಬ್ಬಂದಿಗಳು, ನವೋದಯ ಸ್ವ-ಸಹಾಯ ಸಂಘಗಳ ಸದಸ್ಯರು ಹಾಗೂ ಪ್ರೇರಕರು ಮತ್ತು ದಕ್ಷಿಣ ಕನ್ನಡ ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕಿನ ಸಿಬ್ಬಂದಿ ವರ್ಗದವರು ಒಳಗೊಂಡಂತೆ ಜಿಲ್ಲೆಯ ವಿವಿಧ ತಾಲೂಕಿನಿಂದ ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವರು ಎಂದವರು ವಿವರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರಾದ ಡಾ ಎಂ.ಎನ್. ರಾಜೇಂದ್ರ ಕುಮಾರ್‌ರವರು ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭಾಗವಹಿಸಲಿರುವರು.

ಅದೇ ದಿನ (ನ.30 ರಂದು) ಅಪರಾಹ್ನ 4 ಗಂಟೆಗೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದೆ. ಪುತ್ತೂರು ಆದರ್ಶ ವಿವಿದ್ದೋದ್ದೇಶ ಸಹಕಾರ ಸಂಘ ನಿ., ಇದರ ಅಧ್ಯಕ್ಷರು ಹಾಗೂ ಹಿರಿಯ ಸಹಕಾರಿಗಳಾದ ಕೆ. ಸೀತಾರಾಮ ರೈ ಸವಣೂರು ಇವರು ವಿಜೇತರಿಗೆ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ರಾಮಕೃಷ್ಣ ಸರಕಾರಿ ಪ್ರೌಢಶಾಲೆ, ಪುತ್ತೂರು ಇದರ ಸಂಚಾಲಕ ಹೇಮನಾಥ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ನಗರಸಭೆಯ ಮಾಜಿಅಧ್ಯಕ್ಷ ಜೀವಂಧರ ಜೈನ್ ಮತ್ತು ಪುತ್ತೂರು ನಗರಸಭೆಯ ಸದಸ್ಯ ಪಿ. ಜಿ. ಜಗನ್ನಿವಾಸ್ ರಾವ್ ಭಾಗವಹಿಸಲಿರುವರು ಎಂದವರು ತಿಳಿಸಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್‌ ಸೂರಿಂಜೆ, ನಿರ್ದೇಶ ಕರಾದ ಭಾಸ್ಕರ್‌ ಎಸ್‌. ಕೋಟ್ಯಾನ್‌, ಎಂ. ವಾದಿರಾಜ ಶೆಟ್ಟಿ, ಶಶಿಕುಮಾರ್‌ ರೈ ಬಿ., ಎಸ್‌.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಕೆ. ಜೈರಾಜ್‌ ಬಿ.ರೈ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ , ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ಗೋಪಾಲಕೃಷ್ಣ ಭಟ್ , ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English