ಅಂಗಡಿಗೆ ತಿಂಡಿ ಖರೀದಿಸಲು ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಗೆ 6ವರ್ಷಗಳ ಶಿಕ್ಷೆ

9:38 PM, Tuesday, November 28th, 2023
Share
1 Star2 Stars3 Stars4 Stars5 Stars
(5 rating, 1 votes)
Loading...

ಮಂಗಳೂರು : ಅಂಗಡಿಗೆ ತಿಂಡಿ ಖರೀದಿಸಲು ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣದಲ್ಲಿ ವಿಜಯ್ ಪ್ರವೀಣ್ ಕುಟಿನ್ಹಾ (29) ಎಂಬಾತ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ.

ನ್ಯಾಯಾಧೀಶೆ ಮಂಜುಳಾ ಇಟ್ಟಿ 6ವರ್ಷಗಳ ಕಾಲ ಶಿಕ್ಷೆ ವಿಧಿಸಿ ಈ ತೀರ್ಪು ನೀಡಿದ್ದಾರೆ. 2022ರ ಎ.20ರಂದು ಸಂಜೆ ಬಾಲಕಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಅಂಗಡಿಯೊಂದಕ್ಕೆ ತಿಂಡಿ ಖರೀದಿಸಲು ತೆರಳಿದ್ದಾಳೆ ಎನ್ನಲಾಗಿದೆ. ಆಗ ಬೀಡಿ ಖರೀದಿಸಲು ಬಂದಿದ್ದ ಆರೋಪಿ ವಿಜಯ್ ಪ್ರವೀಣ್ ಕುಟಿನ್ಹಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪವನ್ನು ಮಾಡಲಾಗಿತ್ತು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗಿತ್ತು.

ಇನ್ಸ್ಪೆಕ್ಟರ್ ಶರಣಪ್ಪ ಭಂಡಾರಿ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದರು.ಆರೋಪಿಗೆ ಪೋಕ್ಸೋ ಕಾಯ್ದೆಯ ಕಲಂ 10ರಡಿ 6 ವರ್ಷಗಳ ಕಠಿಣ ಸಜೆ ಹಾಗೂ 20,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ, ಭಾರತೀಯ ದಂಡ ಸಂಹಿತೆಯ ಕಲಂ 354ರಡಿ ಯಲ್ಲಿ 3 ವರ್ಷಗಳ ಕಠಿಣ ಸಜೆ ಮತ್ತು 10,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 3 ತಿಂಗಳ ಸಾದಾ ಸಜೆ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.ಪ್ರಾಸಿಕ್ಯೂಷನ್ ಪರವಾಗಿ ಪೋಕ್ಸೊ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಎಂಬವರು ವಾದ ಮಾಡಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English